ಬ್ರೇಕಿಂಗ್ ನ್ಯೂಸ್
10-06-21 10:17 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 10: ಕೋವಿಡ್- 19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಕೊರೊನಾ ವೈರಸ್ ಪಾಸಿಟಿವಿಟಿ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಕಠಿಣ ಲಾಕ್‌ಡೌನ್ ವಿಸ್ತರಣೆ ಮಾಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು, ಚಾಮರಾಜನಗರ, ಮೈಸೂರು, ದಕ್ಷಿಣ ಕನ್ನಡ ಲಾಕ್‌ಡೌನ್ ನಿಯಮ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸಿಎಂ ತಿಳಿಸಿದರು.
ಲಾಕ್‌ಡೌನ್ ಮುಂದುವರೆಯುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದಿದ್ದಾರೆ.
ಅದೇ ರೀತಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಲವು ಸಡಿಲಿಕೆಗಳೊಂದಿಗೆ ದಿನಾಂಕ: 14-06-2021ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ: 21-06-2021 ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಜೂನ್ 21ರವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಕೆ:
ಇಡೀ ರಾಜ್ಯಾದ್ಯಂತ ಮತ್ತೊಂದು ವಾರದವರೆಗೆ ಲಾಕ್‌ಡೌನ್ ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀರ್ಮಾನ ತೆಗೆದುಕೊಂಡಿದ್ದಾರೆ. ಜೂನ್ 14ಕ್ಕೆ ಕೊನೆಯಾಗಬೇಕಿದ್ದ ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ಕೆಲ ಸಡಿಲಿಕೆಗಳೊಂದಿಗೆ ರಾಜ್ಯಾದ್ಯಂತ ಜೂನ್ 21ರವರೆಗೆ ಲಾಕ್‌ಡೌನ್ ಮುಂದುವರೆಯಲಿದೆ. ಈ ತೀರ್ಮಾನ ತೆಗೆದುಕೊಳ್ಳುವ ಮೊದಲು ತಜ್ಞರೊಂದಿಗೆ ಸುದೀರ್ಘವಾಗಿ ಎರಡು ಗಂಟೆಗಳ ಕಾಲ ಯಡಿಯೂರಪ್ಪ ಅವರು ಸುದೀರ್ಘ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.
ಕೋವಿಡ್ ನಿಯಂತ್ರಣದ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ತಜ್ಞರೊಂದಿಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, "ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ, ಉಳಿದ ಜಿಲ್ಲೆಗಳಲ್ಲಿ ಕೆಲ ರಿಯಾಯತಿಗಳೊಂದಿಗೆ ಲಾಕ್‌ಡೌನ್ ಮುಂದುವರೆಸಲಾಗುತ್ತದೆ" ಎಂದು ಹೇಳಿದ್ದಾರೆ.
ಇಡೀ ರಾಜ್ಯಾದ್ಯಂತ ಕೊರೊನಾ ವೈರಸ್ ಪಾಸಿಟಿವಿಟಿ ದರ ಇವತ್ತು (ಜೂ. 10) ಶೇಕಡಾ 6.58ರಷ್ಟು ಬಂದಿದೆ. ಹೀಗಾಗಿ ಪಾಸಿಟಿವಿಟಿ ದರ ಶೇಕಡಾ 5ಕ್ಕಿಂತ ಕಡಿಮೆಯಾದ ಬಳಿಕ ಅನ್‌ಲಾಕ್ ಪ್ರಕ್ರಿಯೆ ಜಾರಿ ಮಾಡಲು ಸರ್ಕಾರ ಮೊದಲೇ ತೀರ್ಮಾನ ಮಾಡಿತ್ತು. ಆ ಹಿನ್ನೆಲೆಯಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರೆಸಲು ಸರ್ಕಾರ ತೀರ್ಮಾನ ಮಾಡಿದ್ದು, ನಂತರ ಅನ್‌ಲಾಕ್ ಪ್ರಕ್ರಿಯೆ ಆರಂಭಿಸಲು ಇವತ್ತು ನಡೆಸ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
Treading cautiously even as Covid cases dip, the Karnataka government today extended the lockdown in the state by a week, till June 21, while relaxing some curbs in districts with positivity rates under 15 per cent. Among the districts that will see an easing of curbs is Bengaluru Urban.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm