ಬ್ರೇಕಿಂಗ್ ನ್ಯೂಸ್
11-06-21 07:19 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 11: ದಲಿತ ಕವಿಯೆಂದೇ ಹೆಸರಾಗಿದ್ದ ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದ ಡಾ.ಜಿ. ಸಿದ್ದಲಿಂಗಯ್ಯ (67) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರನ್ನು ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಉಸಿರಾಟ ಸಮಸ್ಯೆ ಎದುರಿಸಿದ್ದ ಅವರನ್ನು ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆರಂಭದಲ್ಲಿ ಬೆಡ್ ಸಿಗದೆ ಪರದಾಡಿದ್ದ ಅವರಿಗೆ ಬಳಿಕ ಡಿಸಿಎಂ ಅಶ್ವತ್ಥ ನಾರಾಯಣ ಮೂಲಕ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಕೊಡಿಸಲಾಗಿತ್ತು. ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು.
ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಸಿದ್ದಲಿಂಗಯ್ಯ, ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕವನ, ಸಾಹಿತ್ಯಗಳನ್ನು ರಚಿಸಿದ್ದರು. ಅಧ್ಯಾಪಕರಾಗಿದ್ದ ಅವರು ಅಂಬೇಡ್ಕರ್, ಲೋಹಿಯಾರಿಂದ ಪ್ರೇರಿತಗೊಂಡು ಸಾಮಾಜಿಕ ಹೋರಾಟ ಮತ್ತು ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದರು. ಸಿದ್ದರಾಮಯ್ಯ ಸರಕಾರ ಇದ್ದಾಗ ಸಿದ್ದಲಿಂಗಯ್ಯ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಗಮನ ಸೆಳೆಯುವ ಕೆಲಸ ಮಾಡಿದ್ದರು.
1954ರಲ್ಲಿ ಮಾಗಡಿ ತಾಲೂಕಿನ ಮಂಚನಬೆಲೆಯಲ್ಲಿ ಜನಿಸಿದ್ದ ಸಿದ್ದಲಿಂಗಯ್ಯ ಕಷ್ಟದ ದಿನಗಳನ್ನು ಎದುರಿಸಿ ಜೀವನದಲ್ಲಿ ಮೇಲೆ ಬಂದಿದ್ದರು. ತನ್ನ ಸಾಹಿತ್ಯ, ಹೋರಾಟದಲ್ಲಿ ಸದಾ ಸಾಮಾಜಿಕ ಸಮಾನತೆ ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರ ಜಾಗೃತಿಗಾಗಿ ಜೀವ ತೇದಿದ್ದರು. ಕವನ ಸಂಕಲನಗಳ ಮೂಲಕ ಜನರಲ್ಲಿ ಜಾಗೃತಿಯ ಕಿಡಿ ಹಚ್ಚಿಸಿದ್ದವರು ಸಿದ್ದಲಿಂಗಯ್ಯ. ಹೊಲೆಮಾದಿಗರ ಹಾಡು, ಮೆರವಣಿಗೆ ಮುಂತಾದ ಕವನ ಸಂಕಲನಗಳನ್ನು ಹೊರತಂದಿದ್ದ ಸಿದ್ದಲಿಂಗಯ್ಯ, ಊರುಕೇರಿ ಎಂಬ ಆತ್ಮಕಥನದಲ್ಲಿ ತನ್ನದೇ ಬದುಕಿನ ಚಿತ್ರಣವನ್ನು ತೆರೆದಿಟ್ಟಿದ್ದರು.
Noted Dalit poet Dr. Siddalingaiah, 67, passed away on Friday evening, losing his fight against COVID-19. He had been admitted to the Manipal Hospitals for over a month and was on ventilator support for several weeks. He is survived by his wife, who also was afflicted by the infection but recovered, a son and a daughter.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm