ಬ್ರೇಕಿಂಗ್ ನ್ಯೂಸ್
14-06-21 04:02 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 14: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಸೃಷ್ಟಿಯಾಗಿರುವ ಪರ - ವಿರೋಧ ಬಿಕ್ಕಟ್ಟು ಬಗೆಹರಿಸಲು ಮೂರು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನೇ ಇಕ್ಕಟ್ಟಿಗೆ ಸಿಲುಕಿಸಲು ತಂತ್ರಗಾರಿಕೆ ನಡೆದಿದೆ.
ಶಾಸಕಾಂಗ ಪಕ್ಷದ ಸಭೆ ಕರೆಯಬೇಕೆಂದು ಯಡಿಯೂರಪ್ಪ ವಿರೋಧಿ ಗುಂಪು ಒತ್ತಡ ಹೇರಿರುವ ಮಧ್ಯದಲ್ಲೇ ಹೈಕಮಾಂಡ್ ಪ್ರತಿನಿಧಿ ಅರುಣ್ ಸಿಂಗ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ದೂರುಗಳ ಸುರಿಮಳೆ ಗೈಯ್ಯಲು ತಯಾರಿ ನಡೆದಿದೆ.
ಜೂನ್ 16ರಂದು ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು ಅಂದು ಮೊದಲಿಗೆ ಸಚಿವರ ಸಭೆ ನಡೆಸಲಿದ್ದಾರೆ. ಇದಲ್ಲದೆ ಜೂನ್ 18ಕ್ಕೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯನ್ನೂ ಕರೆದಿದ್ದಾರೆ. ಈ ನಡುವೆ 17ರಂದು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ವಿರೋಧಿ ಗುಂಪು ಒತ್ತಾಯಿಸುತ್ತಿದೆ. ಆದರೆ, ಯಡಿಯೂರಪ್ಪ ಕಡೆಯವರು ಕೊರೊನಾ ಕಾರಣ ಕೊಟ್ಟು ಶಾಸಕಾಂಗ ಪಕ್ಷದ ಸಭೆ ಬೇಡ ಎಂದು ಹೇಳುತ್ತಿದ್ದಾರೆ. ಶಾಸಕಾಂಗ ಪಕ್ಷದ ಸಭೆ ವಿಚಾರದಲ್ಲಿ ಎರಡೂ ಕಡೆಯಿಂದ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎರಡೂ ಪಾಳೆಯವನ್ನು ತೃಪ್ತಿಗೊಳಿಸಲು ಜೂನ್ 17ರಂದು ಶಾಸಕಾಂಗ ಪಕ್ಷದ ಸಭೆಯ ಬದಲಿಗೆ 'ಶಾಸಕರ ಸಭೆ' ಕರೆಯಲಿದ್ದಾರೆ ಎನ್ನಲಾಗುತ್ತಿದೆ.
ಇದೇ ವೇಳೆ, ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯವಾಗಿರುವ ಯಡಿಯೂರಪ್ಪ ವಿರೋಧಿ ಬಣ ಶಾಸಕರ ಸಭೆಗೆ ವಿರೋಧ ವ್ಯಕ್ತಪಡಿಸಿದ್ದು ಶಾಸಕಾಂಗ ಪಕ್ಷದ ಸಭೆಯನ್ನೇ ನಡೆಸುವಂತೆ ಒತ್ತಡ ಹೇರುವುದನ್ನು ಮುಂದುವರೆಸಿದೆ. ಈ ಬಗ್ಗೆ ದೆಹಲಿಗೆ ತೆರಳಿ ಹೈಕಮಾಂಡ್ ಮೂಲಕವೂ ಬಂಡಾಯ ನಾಯಕ ಅರವಿಂದ ಬೆಲ್ಲದ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಡ ಹೇರಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತಿತರ ನಾಯಕರನ್ನು ಭೇಟಿಯಾಗಿರುವ ಅರವಿಂದ ಬೆಲ್ಲದ ಬೆಂಗಳೂರಿಗೆ ಮರಳಿದ ಮೇಲೆ ಮತ್ತಷ್ಟು ಬೆಳವಣಿಗೆ ಆಗುವ ಸಾಧ್ಯತೆ ಇದೆ.
ಇದರ ಜೊತೆಗೆ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಲು ತುದಿಗಾಲಲ್ಲಿ ನಿಂತಿರುವ ಬಸನಗೌಡ ಪಾಟೀಲ್ ಯತ್ನಾಳ್, ಸಿ.ಪಿ. ಯೋಗೀಶ್ವರ್, ಹೆಚ್. ವಿಶ್ವನಾಥ್, ಅರವಿಂದ ಬೆಲ್ಲದ, ತಿಪ್ಪಾರೆಡ್ಡಿ ಮತ್ತಿತರರು ಕತ್ತಿ ಮಸೆಯಲು ರೆಡಿಯಾಗಿದ್ದಾರೆ. ಎಲ್ಲರೂ ಸೇರಿ ಯಡಿಯೂರಪ್ಪ ವಿರುದ್ದ ಚಾರ್ಜ್ ಶೀಟ್ ಸಿದ್ದಪಡಿಸಿಕೊಳ್ಳುತ್ತಿರುವ ಮಾಹಿತಿಯಿದ್ದು ಶಾಸಕರ ಸಭೆಯಲ್ಲಿ ಭಿನ್ನಮತ ಸ್ಫೋಟವಾಗುವ ಸಾಧ್ಯತೆ ಇದೆ.
ಇನ್ನೊಂದೆಡೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಒಂದಷ್ಟು ಶಾಸಕರು ಬಂಡಾಯಗಾರರ ವಿರುದ್ದ ಕ್ರಮಕ್ಕೆ ದೂರು ನೀಡಲು ರೆಡಿಯಾಗಿದ್ದಾರೆ. ಈಗಾಗಲೇ ಯಡಿಯೂರಪ್ಪ ಪರ ಸಹಿ ಸಂಗ್ರಹಿಸಿರುವ ರೇಣುಕಾಚಾರ್ಯ, ಪಟ್ಟಿಯನ್ನು ಅರುಣ್ ಸಿಂಗ್ ಅವರಿಗೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಅರುಣ್ ಸಿಂಗ್ ಆಗಮನ ರಾಜ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಬೆಳವಣಿಗೆಗೆ ಕಾರಣವಾಗಲಿದೆ.
BJP General Secretary Arun Singh is arriving here on Wednesday, days after ruling out replacing Chief Minister B S Yediyurappa amid speculation in some quarters about leadership change. Arun Singh would be in Karnataka for two to three days.
30-10-24 02:02 pm
Bangalore Correspondent
Chikkamagaluru accident, Hassan: ಚಿಕ್ಕಮಗಳೂರು...
30-10-24 12:18 pm
Actor Darshan Bail, Released, Murder: ಕೊನೆಗೂ...
30-10-24 11:55 am
ರೈತರ ಜಮೀನಿಗೆ ವಕ್ಫ್ ನೋಟಿಸ್ ; ವಿಜಯಪುರದಲ್ಲಿ ತೀವ್...
29-10-24 11:02 pm
ರೈತರ ಜಮೀನಿಗೆ ವಕ್ಫ್ ನೋಟಿಸ್ ; ಬೇಲಿಯೇ ಎದ್ದು ಹೊಲ...
29-10-24 10:09 pm
29-10-24 08:23 pm
HK News Desk
ಕಾಞಂಗಾಡ್ ; ತೈಯ್ಯಂ ಉತ್ಸವಕ್ಕೂ ಮುನ್ನ ಪಟಾಕಿ ದುರಂತ...
29-10-24 12:01 pm
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
30-10-24 06:32 pm
Mangalore Correspondent
Mangalore Fire, Pilikula: ಪಿಲಿಕುಳ ನಿಸರ್ಗಧಾಮದಲ...
30-10-24 04:28 pm
Mangalore Rajyotsava Award 2024: ಜಿಲ್ಲಾ ರಾಜ್ಯ...
28-10-24 10:51 pm
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
29-10-24 01:01 pm
Mangalore Correspondent
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm
Mangalore News, Cyber Fraud: ಮಹಾರಾಷ್ಟ್ರದ ಎಸ್ಐ...
27-10-24 08:57 pm