ಬ್ರೇಕಿಂಗ್ ನ್ಯೂಸ್
15-06-21 03:55 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜೂನ್ 15: ಆಂಬ್ಯುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ನಡೆದಿದೆ.
ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ, ಚಿತ್ರದುರ್ಗ ನಗರ ಕಡೆಯಿಂದ ಹೋಗುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಮೂವರು ಯುವಕರ ದೇಹ ಒಂದೊಂದು ಕಡೆ ಬಿದ್ದಿವೆ. ಇದೇ ವೇಳೆ ಸ್ಕೂಟಿ ಸಂಪೂರ್ಣ ಜಖಂ ಆಗಿದೆ.
ಸಾವನ್ನಪ್ಪಿದ ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಅರುಣ್ ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತಪಟ್ಟ ಮೂರು ಜನ ಯುವಕರು ಚಿತ್ರದುರ್ಗ ನಗರದವರಾಗಿದ್ದು, ಮೂವರು ಯುವಕರು ಹೊಳಲ್ಕೆರೆಯಿಂದ ಕೆಲಸ ಮುಗಿಸಿಕೊಂಡು ಚಿತ್ರದುರ್ಗ ಕಡೆ ಬರುವಾಗ, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆಂಬ್ಯುಲೆನ್ಸ್ ಹೋಗುವಾಗ ಈ ಘಟನೆ ನಡೆದಿದೆ.
ಈ ಅಪಘಾತಕ್ಕೆ ಆಂಬ್ಯುಲೆನ್ಸ್ ಚಾಲಕ ಅತಿವೇಗ ಕಾರಣ ಎಂದು ತಿಳಿದು ಬಂದಿದೆ.
Chitradurga Ambulance rams on scooty three youths on two Wheeler dead on spot.
30-10-24 02:02 pm
Bangalore Correspondent
Chikkamagaluru accident, Hassan: ಚಿಕ್ಕಮಗಳೂರು...
30-10-24 12:18 pm
Actor Darshan Bail, Released, Murder: ಕೊನೆಗೂ...
30-10-24 11:55 am
ರೈತರ ಜಮೀನಿಗೆ ವಕ್ಫ್ ನೋಟಿಸ್ ; ವಿಜಯಪುರದಲ್ಲಿ ತೀವ್...
29-10-24 11:02 pm
ರೈತರ ಜಮೀನಿಗೆ ವಕ್ಫ್ ನೋಟಿಸ್ ; ಬೇಲಿಯೇ ಎದ್ದು ಹೊಲ...
29-10-24 10:09 pm
29-10-24 08:23 pm
HK News Desk
ಕಾಞಂಗಾಡ್ ; ತೈಯ್ಯಂ ಉತ್ಸವಕ್ಕೂ ಮುನ್ನ ಪಟಾಕಿ ದುರಂತ...
29-10-24 12:01 pm
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
30-10-24 06:32 pm
Mangalore Correspondent
Mangalore Fire, Pilikula: ಪಿಲಿಕುಳ ನಿಸರ್ಗಧಾಮದಲ...
30-10-24 04:28 pm
Mangalore Rajyotsava Award 2024: ಜಿಲ್ಲಾ ರಾಜ್ಯ...
28-10-24 10:51 pm
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
29-10-24 01:01 pm
Mangalore Correspondent
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm
Mangalore News, Cyber Fraud: ಮಹಾರಾಷ್ಟ್ರದ ಎಸ್ಐ...
27-10-24 08:57 pm