ಬ್ರೇಕಿಂಗ್ ನ್ಯೂಸ್
16-06-21 05:52 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಲು ಕೆಲವು ಶಾಸಕರು ದೆಹಲಿಗೆ ಹೋಗಿದ್ದು ನಿಜ. ಪಕ್ಷದಲ್ಲಿ ಈ ಬಗ್ಗೆ ಗೊಂದಲ ಆಗಿರುವುದೂ ನಿಜ ಎಂದು ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬಿರುಸು ಪಡೆದಿರುವಾಗಲೇ ಹಿರಿಯ ಸಚಿವರಾಗಿರುವ ಈಶ್ವರಪ್ಪ ಈ ರೀತಿಯ ಹೇಳಿಕೆ ಕೊಟ್ಟು ಅಚ್ಚರಿ ಸೃಷ್ಟಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ಕೆಲವು ಶಾಸಕರು ದೆಹಲಿಗೆ ಹೋಗಿ ಯಡಿಯೂರಪ್ಪ ಅವರನ್ನು ಬದಲಿಸಬೇಕೆಂದು ಬೇಡಿಕೆ ಇಟ್ಟಿರುವುದು ಸತ್ಯ. ಸಂಪೂರ್ಣ ಅಸತ್ಯವೆಂದು ನಾನು ಹೇಳುವುದಿಲ್ಲ. ಕೆಲವು ಶಾಸಕರು ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಇರಬೇಕು ಎಂದು ಆಗ್ರಹಿಸುತ್ತಾರೆ. ಇನ್ನು ಕೆಲವು ಮಂದಿ ಬದಲಾವಣೆ ಆಗಬೇಕೆಂದು ಹೇಳುತ್ತಿದ್ದಾರೆ. ಈ ಬಗ್ಗೆ ದೆಹಲಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ವರಿಷ್ಠರು ಏನು ಹೇಳುತ್ತಾರೋ ಅದನ್ನು ನಾವು ಪಾಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಪಕ್ಷದಲ್ಲಿ ನಾಯಕತ್ವದ ವಿಚಾರದಲ್ಲಿ ಗೊಂದಲ ಇರುವುದು ನಿಜ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬರುತ್ತಿದ್ದಾರೆ. ಅವರು ಬಂದು ಮಾತುಕತೆ ನಡೆಸಿದ ಬಳಿಕ ಗೊಂದಲ ಬಗೆಹರಿಯಲಿದೆ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ವರಿಷ್ಠರು ನಿರ್ಣಯ ತೆಗೆದುಕೊಳ್ಳಲಿದ್ದಾರೆ. ಏನು ಬೇಕಾದ್ರೂ ಆಗಬಹುದು ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಮೂರು ದಿನಗಳ ಕಾಲ ಶಾಸಕರು, ಸಚಿವರ ಜೊತೆ ಮಾತುಕತೆ ನಡೆಸಲಿದ್ದಾರೆ. ವಿರೋಧಿ ಬಣದ ಶಾಸಕರು ಯಡಿಯೂರಪ್ಪ ಅವರನ್ನು ಬದಲಿಸಲು ಒತ್ತಡ ಹೇರುತ್ತಿದ್ದರೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಅವರನ್ನೇ ಮುಂದುವರಿಸಲು ಪಟ್ಟು ಹಿಡಿದಿದ್ದಾರೆ. ಈ ರೀತಿಯ ಬೆಳವಣಿಗೆ ಮಧ್ಯದಲ್ಲಿ ಈಶ್ವರಪ್ಪ, ಗೊಂದಲ ಇರುವುದು ನಿಜ. ಅಲ್ಲದೆ ನಾಯಕತ್ವದ ವಿಚಾರದಲ್ಲಿ ಏನು ಬೇಕಾದ್ರೂ ಆಗಬಹುದು ಅನ್ನುವ ಮೂಲಕ ಬದಲಾವಣೆ ಆಶಯವನ್ನು ಹೊರಹಾಕಿದ್ದಾರೆ.
Senior Karnataka BJP minister K S Eshwarappa on Wednesday admitted that there were calls within the party for Chief Minister B S Yediyurappa’s removal, and said that the high command would take a final decision on this.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm