ಬ್ರೇಕಿಂಗ್ ನ್ಯೂಸ್
16-06-21 06:11 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೀಡಾಗಿರುವಾಗಲೇ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸಿ.ಪಿ. ಯೋಗೀಶ್ವರ್ ಹೊರತುಪಡಿಸಿ ಉಳಿದ 31 ಸಚಿವರು ಭಾಗಿಯಾಗಿದ್ದಾರೆ.

ಹಿರಿಯ ಸಚಿವರಾದ ಈಶ್ವರಪ್ಪ, ಅಶೋಕ್, ಡಿಸಿಎಂಗಳಾದ ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಸೇರಿ ಎಲ್ಲ ಸಚಿವರು ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರಮುಖವಾಗಿ ಸಭೆಯಲ್ಲಿ ನಾಯಕತ್ವದ ವಿಚಾರ ಚರ್ಚೆಗೀಡಾಗುವ ಸಾಧ್ಯತೆಯಿದೆ. ಆದರೆ, ಎಲ್ಲ ಸಚಿವರ ಅಹವಾಲುಗಳನ್ನು ಪಡೆದು ಉಸ್ತುವಾರಿ ಅರುಣ್ ಸಿಂಗ್ ಹೈಕಮಾಂಡಿಗೆ ಮುಟ್ಟಿಸಲಿದ್ದಾರೆ.

ಈಗಾಗ್ಲೇ ರಾಜ್ಯದಲ್ಲಿ ಎರಡು ಬಣಗಳಾಗಿರುವ ಶಾಸಕರ ಗುಂಪು ಯಡಿಯೂರಪ್ಪ ಪರ ಮತ್ತು ವಿರೋಧವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಕೆಲವು ಶಾಸಕರು ಬಹಿರಂಗವಾಗಿಯೇ ಹೇಳಿಕೆಗಳನ್ನೂ ನೀಡಿದ್ದಾರೆ. ಸಚಿವ ಯೋಗೀಶ್ವರ್ ಪ್ರಮುಖವಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ, ಯಡಿಯೂರಪ್ಪ ಅವರನ್ನು ಬದಲಿಸುವ ನಿಟ್ಟಿನಲ್ಲಿ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.

ಇದೇ ವೇಳೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಸಹಿ ಸಂಗ್ರಹ ಮಾಡಿದ್ದು, ವಿರೋಧಿ ಬಣಗಳ ಹೆಸರಲ್ಲಿ ಹೇಳಿಕೆ ನೀಡುತ್ತಿರುವ ಮಂದಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. ಉಸ್ತುವಾರಿ ಅರುಣ್ ಸಿಂಗ್ ನಾಳೆ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಅವರ ಯಾವುದೇ ಕಾರ್ಯಕ್ರಮ ಅಂತಿಮ ಆಗಿಲ್ಲ.
ಇಂದು ಮಧ್ಯಾಹ್ನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅರುಣ್ ಸಿಂಗ್ ಅವರಲ್ಲಿ ಸುದ್ದಿಗಾರರು ನಾಯಕತ್ವದ ವಿಚಾರದಲ್ಲಿ ಪ್ರಶ್ನೆ ಮುಂದಿಟ್ಟಾಗ, ಆ ಬಗ್ಗೆ ಉತ್ತರಿಸದೇ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸುವುದಕ್ಕಾಗಿ ಬಂದಿದ್ದೇನೆ ಎಂದುತ್ತರಿಸಿ ಹೊರಟಿದ್ದರು. ನಾಯಕತ್ವದ ವಿಚಾರದಲ್ಲಿ ಚರ್ಚೆ ನಡೆಸದೇ ಕೇವಲ ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸಕ್ಕೆ ಮಾತ್ರ ಕೈಹಾಕುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕು.
Bjp leadership issue, party state in-charge Arun Singh meeting held in Bangalore
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm