ಬ್ರೇಕಿಂಗ್ ನ್ಯೂಸ್
17-06-21 12:20 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17: ಬಿಜೆಪಿಯಲ್ಲಿ ನಾಯಕತ್ವ ವಿಚಾರದಲ್ಲಿ ಅಪಸ್ವರ ಎದ್ದಿರುವಾಗಲೇ ಬೆಂಗಳೂರಿಗೆ ಬಂದಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಚರ್ಚೆ ನಡೆದಿಲ್ಲ ಎನ್ನಲಾಗುತ್ತಿದೆ. ಸಭೆ ಬಳಿಕ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ನಾಯಕತ್ವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿಲ್ಲ ಎಂದಿದ್ದಾರೆ.
ಸಿಎಂ ಮತ್ತು ಸಚಿವರುಗಳ ಜೊತೆ ಮಾತುಕತೆ ನಡೆಸಿದ್ದೇನೆ. ಕೋವಿಡ್ ಸಂಬಂಧಿಸಿ ಸೂಚನೆಗಳನ್ನು ನೀಡಿದ್ದೇನೆ. ಸಚಿವರು ಎಲ್ಲ ಜಿಲ್ಲೆಗೆ ತೆರಳಿ ಕಾರ್ಯಕರ್ತರ ಜೊತೆ ಕೆಲಸ ಮಾಡಬೇಕು. ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದ್ದಾಗಿ ತಿಳಿಸಿದರು.


ಪ್ರತಿ ಗುರುವಾರ ಒಂದು ದಿನ ಆಯಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಬೇಕು. ಪ್ರಸ್ತುತ ಕೊರೊನಾದಿಂದ ಮೃತಪಟ್ಟ ಬಡವರ ಕುಟುಂಬಕ್ಕೆ ೧ ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಇದು ಸಂಬಂಧಪಟ್ಟವರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಬಡವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು.
ಸಭೆಯಲ್ಲಿ ಕೋವಿಡ್, ಪಕ್ಷ ಸಂಘಟನೆ, ಶಾಸಕರ ಸಮಸ್ಯೆ ಆಲಿಸುವ ಬಗ್ಗೆ ಮಾತ್ರ ಚರ್ಚೆ ಆಗಿದೆ. ನಾಯಕತ್ವದ ವಿಚಾರದಲ್ಲಿ ಚರ್ಚೆ ಆಗಿಲ್ಲ. ಪಕ್ಷದ ಶಾಸಕರಾಗಲಿ, ಕಾರ್ಯಕರ್ತರಾಗಲಿ ಪಕ್ಷಕ್ಕೆ ಧಕ್ಕೆ ತರುವ ಹೇಳಿಕೆ ಕೊಡಬಾರದು. ಬಹಿರಂಗ ಹೇಳಿಕೆ ಕೊಡದಂತೆ ಸೂಚಿಸಿದ್ದೇನೆ ಎಂದರು.


ಶಾಸಕರಾದ ಯತ್ನಾಳ್, ಅರವಿಂದ ಬೆಲ್ಲದ ಅವರ ಬಗ್ಗೆ ಚರ್ಚಿಸಿದ್ದೇವೆ. ಯಾರು ಕೂಡ ತಮ್ಮ ಹೇಳಿಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ನೋಡಿಕೊಳ್ಳಬೇಕು. ಇದರ ಬಗ್ಗೆ ಕಟ್ಟುನಿಟ್ಟಾಗಿ ಸೂಚಿಸಿದ್ದೇವೆ. ಯಾರೂ ಬಹಿರಂಗವಾಗಿ ಹೇಳಿಕೆ ಕೊಡಬಾರದು. ಶಾಸಕರು ತಮ್ಮ ಸಮಸ್ಯೆಗಳನ್ನ ಹೇಳಿಕೊಳ್ಳಬಹುದು. ಎಲ್ಲರಿಗೂ ಮುಕ್ತ ಚರ್ಚೆಗೆ ಅವಕಾಶವಿದೆ. ಆದರೆ ಪಕ್ಷಕ್ಕೆ ಧಕ್ಕೆ ಬರುವ ರೀತಿ ಹೇಳಿಕೆಗಳನ್ನು ನೀಡುವುದು ಬೇಡ ಎಂದು ಎಚ್ಚರಿಕೆ ನೀಡಿದರು.

ಇನ್ನು ಬಂಡಾಯ ನಾಯಕರೆಂದು ಗುರುತಿಸಿಕೊಂಡ, ಸಚಿವ ಸಿ.ಪಿ.ಯೋಗೀಶ್ವರ್, ಅರುಣ್ ಸಿಂಗ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸಮಸ್ಯೆ ಹೇಳಲಿದ್ದಾರೆ ಎನ್ನಲಾಗುತ್ತಿದೆ. ಇಂದು (ಜೂ.17) ಶಾಸಕರ ಜೊತೆ ಅರುಣ್ ಸಿಂಗ್ ಮಾತುಕತೆ ನಡೆಸಲಿದ್ದಾರೆ. ನಾಯಕತ್ವದ ವಿಚಾರದಲ್ಲಿನ ಅಪಸ್ವರದ ಬಗ್ಗೆ ಶಾಸಕರ ಅಭಿಪ್ರಾಯಗಳನ್ನು ಪಡೆದು ಹೈಕಮಾಂಡಿಗೆ ತಿಳಿಸಲಿದ್ದಾರೆ ಎನ್ನಲಾಗುತ್ತಿದೆ.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm