ಬ್ರೇಕಿಂಗ್ ನ್ಯೂಸ್
17-06-21 05:54 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 17 : ನಾಯಕತ್ವ ಬದಲಾವಣೆ ವಿಚಾರದಲ್ಲಿ ರಾಜ್ಯ ಬಿಜೆಪಿ ಸರಕಾರದಲ್ಲಿ ಕಚ್ಚಾಟ ಎದ್ದಿರುವಾಗಲೇ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಸವಣ್ಣನದ ವಚನ ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿದ್ದು ನಾಯಕನಿಲ್ಲದ ಸರಕಾರ ಇರುವುದೇಕೆ ? ಕೂಡಲೇ ವಿಸರ್ಜಿಸಿ ಬಿಜೆಪಿ ನಾಯಕರನ್ನು ತಿವಿದಿದ್ದಾರೆ.
'ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ. ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ ಕೂಡಲ ಸಂಗಮದೇವಾ.. ಎಂಬ ವಚನವನ್ನು ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, 'ಬಿಜೆಪಿಯಲ್ಲಿ ನಾಯಕತ್ವ ಇದೆಯೋ? ಇಲ್ಲವೋ? ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ ಎಂದು ಪ್ರಶ್ನೆ ಮಾಡಿದ್ದಾರೆ.
'ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ ಸಿಎಂ ಆಗಬಲ್ಲ ನಾಯಕನೇ ಇಲ್ಲವಂತೆ, ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ, ವಿಸರ್ಜಿಸಿ ಮೊದಲು' ಎಂದು ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
'ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ'
ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಈ ದುರಾಡಳಿತ ಬರಲು, ಅದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು? ಇದೇ ಕಾಂಗ್ರೆಸ್ ಅಲ್ಲವೇ? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು.
— H D Kumaraswamy (@hd_kumaraswamy) June 17, 2021
7/8
'ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರ್ಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರ್ಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
'ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ "ಸಮಾಜ ಸುಧಾರಕರು" ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ'
ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು.
— H D Kumaraswamy (@hd_kumaraswamy) June 17, 2021
ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ
ಮನೆಯೊಳಗೆ ರಜ ತುಂಬಿ
ಮನೆಯೊಳಗೆ ಮನೆಯೊಡೆಯನಿದ್ದಾನೊ
ಇಲ್ಲವೊ
- ಕೂಡಲ ಸಂಗಮದೇವ
ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ.
1/8
'ಕೋವಿಡ್, ಲಾಕ್‌ಡೌನ್‌ಗಳಿಂದ ತತ್ತರಿಸಿರುವ ಕ್ಷೋಭೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
30-10-24 02:02 pm
Bangalore Correspondent
Chikkamagaluru accident, Hassan: ಚಿಕ್ಕಮಗಳೂರು...
30-10-24 12:18 pm
Actor Darshan Bail, Released, Murder: ಕೊನೆಗೂ...
30-10-24 11:55 am
ರೈತರ ಜಮೀನಿಗೆ ವಕ್ಫ್ ನೋಟಿಸ್ ; ವಿಜಯಪುರದಲ್ಲಿ ತೀವ್...
29-10-24 11:02 pm
ರೈತರ ಜಮೀನಿಗೆ ವಕ್ಫ್ ನೋಟಿಸ್ ; ಬೇಲಿಯೇ ಎದ್ದು ಹೊಲ...
29-10-24 10:09 pm
29-10-24 08:23 pm
HK News Desk
ಕಾಞಂಗಾಡ್ ; ತೈಯ್ಯಂ ಉತ್ಸವಕ್ಕೂ ಮುನ್ನ ಪಟಾಕಿ ದುರಂತ...
29-10-24 12:01 pm
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
30-10-24 04:28 pm
Mangalore Correspondent
Mangalore Rajyotsava Award 2024: ಜಿಲ್ಲಾ ರಾಜ್ಯ...
28-10-24 10:51 pm
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
Pejawar Seer, Caste Census: ಪ್ರಜಾಪ್ರಭುತ್ವದಲ್ಲ...
27-10-24 10:37 pm
29-10-24 01:01 pm
Mangalore Correspondent
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm
Mangalore News, Cyber Fraud: ಮಹಾರಾಷ್ಟ್ರದ ಎಸ್ಐ...
27-10-24 08:57 pm