ಮಳೆರಾಯನ ಅಬ್ಬರ ; ದಕ್ಷಿಣ ಕನ್ನಡ ಸೇರಿ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ 

18-06-21 06:12 pm       Satish   ಕರ್ನಾಟಕ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ  ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ .

ಬೆಂಗಳೂರು, ಜೂನ್ 18: ರಾಜ್ಯದಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. 

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ  ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ .

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದ್ದು, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. ಜೂನ್ 3ರ ನಂತರ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದ್ದು, ಈಗ ಮುಂಗಾರು ಅಬ್ಬರ ಹೆಚ್ಚಾಗಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ಜೂನ್ ಎರಡನೇ ಮತ್ತು ಮೂರನೇ ವಾರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮಟ್ಟದಲ್ಲಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಲೆನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: 

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಯೂ ಅಧಿಕ ಮಳೆಯಾಗುವ ಸೂಚನೆ ನೀಡಲಾಗಿದ್ದು, ಈ ರಾಜ್ಯಗಳಲ್ಲಿ ಇಂದು ಹಾಗೂ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕಳೆದ ಮೂರು ದಿನಗಳಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ.

The India Meteorological Department (IMD) on Friday issued red alerts for heavy to very heavy rainfall in three districts in Karnataka for Friday and Saturday. The weather body has also issued an orange alert for three other districts for the same period, in its weather bulletin earlier in the day.