ಬ್ರೇಕಿಂಗ್ ನ್ಯೂಸ್
21-06-21 01:11 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 21: ನಾಯಕತ್ವ ಬದಲಾವಣೆಯ ಬಿಕ್ಕಟ್ಟು, ಭಿನ್ನಮತದ ಅಪಸ್ವರ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ, ಮಾತುಕತೆ.. ಹೀಗೆ ಭಿನ್ನರಾಗದ ಏಳು ಬೀಳುಗಳ ನಡುವೆಯೇ ಇಂದು ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ಕೊರೊನಾ ಲಾಕ್ಡೌನ್ ಸಡಿಲಿಕೆ, ಕೆಲವು ಜಿಲ್ಲೆಗಳಲ್ಲಿ ಸೋಂಕು ಏರಿಕೆ ವಿಚಾರದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ. ಸಭೆಯಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಾಧ್ಯತೆ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಲಿದೆ. ಅಲ್ಲದೆ, ಲಸಿಕಾ ಮೇಳದ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಸಚಿವರಿಗೆ ನೀಡುವ ಸಾಧ್ಯತೆಯಿದೆ.

ಕಳೆದ ವಾರ ಅರುಣ್ ಸಿಂಗ್ ಜೊತೆಗಿನ ಒನ್ ಟು ಒನ್ ಸಭೆಯಲ್ಲಿ ಕೆಲವು ಸಚಿವರು ಮತ್ತು ಶಾಸಕರು ಸಿಎಂ ಕಾರ್ಯವೈಖರಿಯ ವಿರುದ್ಧ ದೂರು ನೀಡಿದ್ದರು ಎಂಬ ವರದಿಗಳಿದ್ದವು. ಆಬಳಿಕದ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು ರಾಜಕೀಯ ಕಾರಣಗಳಿಂದ ಈ ಸಭೆ ಮಹತ್ವದ್ದಾಗಿದೆ. ಅರುಣ್ ಸಿಂಗ್ ದೆಹಲಿಗೆ ತೆರಳಿದ ನಂತರ ಪಕ್ಷದಲ್ಲಿ ಅಶಿಸ್ತು ತೋರಿದ ಒಂದಿಬ್ಬರು ಸಚಿವರನ್ನು ಕೈಬಿಡಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದ್ದು ಇಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಅಲ್ಲದೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ. ಪಕ್ಷ ಮತ್ತು ಸಿಎಂ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಯೋಗೀಶ್ವರ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡುತ್ತಾರೆಯೇ ಎನ್ನುವ ಪ್ರಶ್ನೆಗಳಿದ್ದು ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಪೂರ್ಣ ಆಶೀರ್ವಾದ ನೀಡಿದ್ದರೆ, ಯೋಗಿಯನ್ನು ಸಂಪುಟದಿಂದ ತೆಗೆದುಹಾಕುವ ಸಾಧ್ಯತೆಯೂ ಇದೆ.
It was thought that with the visit of state BJP in-charge, Arun Singh, to the city and with his return to Delhi, the jitters created by dissident BJP leaders had been blown away. However, former minister Ramesh Jarkiholi unexpectedly left for Mumbai on Sunday June 20. His action gave rise to some rumours.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm