ಬ್ರೇಕಿಂಗ್ ನ್ಯೂಸ್
24-06-21 04:31 pm Headline Karnataka News Network ಕರ್ನಾಟಕ
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಜತೆ ಚರ್ಚಿಸಿದ್ದೇನೆ. ಕೂಡಲೇ ಕ್ರಮಕೈಗೊಳ್ಳುವಂತೆ ಕಮಿಷನರ್ಗೆ ಸೂಚಿಸಿದ್ದೇನೆ. 24 ಗಂಟೆಯೊಳಗೆ ಕೊಲೆ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕದಿರೇಶ್ ಹತ್ಯೆ ಆರೋಪಿಗಳು ಜೈಲಿನಿಂದ ರಿಲೀಸ್ ಆಗಿದ್ದಾರೆ. ಅವರೇ ರೇಖಾರನ್ನು ಹತ್ಯೆ ಮಾಡಿರುವ ಅನುಮಾನವಿದೆ. ಏನೇ ಆದರೂ ರೇಖಾ ಕೊಲೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಯಿ ಸಾವಿನ ಸುದ್ದಿಯನ್ನು ಕೇಳಿ ನನಗೆ ಭಯ ಆಯಿತು. ಇಂದು ನಮ್ಮ ಸಂಬಂಧಿ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದರು. ಪೀಟರ್ ಎಂಬುವರು ಅಮ್ಮನ ಕತ್ತಿನ ಭಾಗಕ್ಕೆ ಹೊಡೆದಿದ್ದಾರೆ. ಪೀಟರ್ ನಮ್ಮ ಹತ್ತಿರದ ಸಂಬಂಧಿಯೂ ಆಗಬೇಕು. ನಮ್ಮ ತಂದೆ ಜೊತೆಯೂ ಪೀಟರ್ ಒಡನಾಟ ಹೊಂದಿದ್ದರು. ನಮಗೆ ಗೊತ್ತಿರುವವರೇ ಇದನ್ನು ಮಾಡಿದ್ದಾರೆ. ತಂದೆ ಹತ್ಯೆ ಬಳಿಕ ನನ್ನನ್ನು ಏರಿಯಾದಿಂದ ದೂರ ಇಟ್ಟಿದ್ದರು. ಆದರೆ ಅವರು ಜನರೊಂದಿಗೆ ಅವರು ವಾರ್ಡ್‌ನಲ್ಲೇ ಉಳಿದಿದ್ದರು ಎಂದು ಮೃತ ರೇಖಾ ಕದಿರೇಶ್ ಅವರ ಕದಿರೇಶ್ ಮಗ ರಾಹುಲ್ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯ ಕಿಮ್ಸ್ ಆಸ್ಪತ್ರೆ ಶವಾಗಾರದಲ್ಲಿರುವ ರೇಖಾ ಕದಿರೇಶ್ ಅವರ ಮೃತದೇಹವನ್ನು ಇಡಲಾಗಿದ್ದು, ಇಂದು ಮರಣೋತ್ತರ ಪರೀಕ್ಷೆ ನಡೆಯುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಪೊಲೀಸ್ ಪ್ರಕ್ರಿಯೆಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಮಾಹಿತಿ ಸಂಗ್ರಹಿಸುವ ಕೆಲಸ ಮುಂದುವರಿದಿದೆ. ಪ್ರಕ್ರಿಯೆಗಳು ಮುಗಿದ ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ.
Read: ಬಿಜೆಪಿಯ ಮಾಜಿ ಬಿಬಿಎಂಪಿ ಮಹಿಳಾ ಕಾರ್ಪೊರೇಟರ್ ಬರ್ಬರ ಕೊಲೆ ! ಹಾಡಹಗಲೇ ರೌಡಿಗಳ ಅಟ್ಟಹಾಸ
Bangalore Former Corporator Rekha Murder CM assures arrest of criminals in 24 hours. Also, her son Rahul has alleged that Peter is the one who had done this crime.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 06:39 pm
Mangalore Correspondent
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
04-12-25 04:18 pm
Bangalore Correspondent
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm