ಬ್ರೇಕಿಂಗ್ ನ್ಯೂಸ್
24-06-21 07:35 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಜೂನ್ 24: ಜಿಲ್ಲಾಡಳಿತ ನನ್ನನ್ನು ನಿರ್ಲಕ್ಷ್ಯ ಮಾಡಿದೆ, ಜಿಲ್ಲಾ ಉಸ್ತುವಾರಿ ಸಚಿವರು ನನ್ನನ್ನು ಸಭೆಗಳಿಗೆ ಕರೆಯದೆ ಪ್ರೊಟೊಕಾಲ್ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಎಂಎಲ್ಸಿ , ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತ ಪ್ರಸಂಗ ನಡೆದಿದೆ.
ಜಿಲ್ಲಾಡಳಿತ ನನ್ನನ್ನ ನಿರ್ಲಕ್ಷ್ಯ ಮಾಡಿದ್ದಾರೆ. ಯಾವುದೇ ಸಭೆ -ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿಯಾಗಿ ಕುಳಿತು ಪ್ರತಿಭಟನೆ ನಡೆಸಿದರು. ಜಿಲ್ಲಾ ಮಂತ್ರಿಗಳಿಗೆ ಪ್ರೊಟೋಕಾಲ್ ಏನೆಂದು ಗೊತ್ತಿಲ್ಲವಾ.. ಎಂಟು ಬಾರಿ ಶಾಸಕರಾಗಿದ್ದಾರೆ, ನಾನು ಹೇಳಿಕೊಡಬೇಕಾ ಎಂದು ಸಚಿವ ಎಸ್. ಅಂಗಾರ ಅವರನ್ನು ಹೆಸರೆತ್ತದೆ ಪ್ರಶ್ನೆ ಮಾಡಿದ್ದಾರೆ.
ಒಂದೆರಡು ಬಾರಿಯಲ್ಲ ಹಲವು ಬಾರಿ ಕೇಳಿದ್ದೇನೆ. ಅವರು ನಮಗೆ ಬುದ್ಧಿ ಹೇಳಬೇಕಾದವರು. ಸರಕಾರ ಅವರಿಗೆ ಜನರ ದುಡ್ಡಲ್ಲಿ ಎಲ್ಲಾ ಅಧಿಕಾರಿಗಳನ್ನ ನೀಡಿದೆ. ಕೈಗೊಬ್ಬ , ಕಾಲಿಗೊಬ್ಬ ಪಿಎಗಳು ಇದ್ದಾರೆ. ಪಿಎಗಳ ಮೂಲಕ ಶಾಸಕರಿಗೆ ಪ್ರವಾಸದ ಕಾರ್ಯಕ್ರಮಗಳನ್ನು ತಿಳಿಸಲು ಆಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ತಿಂಗಳ ಪ್ರವಾಸದ ಕಾಪಿ ಹಾಕುವುದಿಲ್ಲವೇ, ಕಾರ್ಯಕ್ರಮದ ಕಾಪಿಯನ್ನ ಶಾಸಕರಿಗೆ ಏಕೆ ಕಳಿಸಲ್ಲ ಎಂದು ಸಚಿವ ಅಂಗಾರ ವಿರುದ್ಧ ಕಿಡಿಕಾರಿದ್ದಾರೆ. ಆರಂಭದಲ್ಲೇ ಜಿಲ್ಲಾ ಮಂತ್ರಿಗಳಿಗೂ ಹೇಳಿದ್ದೇನೆ. ಪ್ರಾಣೇಶ್ ಇದ್ದರೂ ನಿನ್ನದು ಬರಬೇಕು ಕಣಯ್ಯ ಎಂದಿದ್ದೇನೆ. ಅವರು ಉಪಸಭಾಪತಿ. ಗೌರವವಿದೆ. ಸಂಬಂಧದಲ್ಲಿ ಹೇಳಿದ್ದೇನೆ. ಅಧಿಕಾರಿಗಳ ಸಭೆಗಳಲ್ಲಿ ಭೋಜೇಗೌಡ ಇರುವುದಿಲ್ಲ. ಸಭೆಯಲ್ಲಿ ಶಾಸಕರು, ಸಂಸದರು ಕೂತಾಗ ನಮಗೆ ಬೇರೆಯವರು ಕೇಳುತ್ತಾರೆ. ನಾನೊಬ್ಬ ಜನಪ್ರತಿನಿಧಿಯಾಗಿ ಸಭೆಗೆ ಹೋಗಿಲ್ಲ ಅಂದರೆ ಜನ ಏನೆಂದು ಹೇಳುತ್ತಾರೆ.
ಪ್ರೊಟೋಕಾಲ್ ಏನ್ ಮೇಂಟೇನ್ ಮಾಡಿದ್ದೀರಾ ನೀವು. ನಾನು ಕೇಳಬಾರದಾ. ನಾನು ಶಾಸಕ ಅಲ್ವಾ. 6 ಜಿಲ್ಲೆ 39 ತಾಲೂಕಿನಲ್ಲಿ ನನಗೆ ಪ್ರೋಟೋಕಾಲ್ ಇದೆ. ಇದು ನನ್ನ ನೋಡೆಲ್ ಕ್ಷೇತ್ರ. ನಿಮ್ಮ ಗುಂಪುಗಾರಿಕೆ ಇದ್ದರೆ ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಿ. ಜಿಲ್ಲಾ ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ, ನನಗೆ ಅದು ಗೊತ್ತಿದೆ. ಆ ಶಾಸಕರು, ಈ ಶಾಸಕರನ್ನ ಕರೆಯಬಾರದು ಎಂದು ನಿಮ್ಮ ಗುಂಪುಗಾರಿಕೆಯಿಂದ ನಿಮ್ಮ ಪಕ್ಷದ ಕಚೇರಿಯಲ್ಲಿ ಅಥವಾ ಮನೆಯಲ್ಲಿ ಇಟ್ಟುಕೊಳ್ಳಿ. ಜಿಲ್ಲಾ ಸಚಿವರು ಬರುವಾಗ ಪ್ರೋಟೋಕಾಲ್ ಮೇನ್‍ಟೇನ್ ಮಾಡಿ. ಮಾಡಬೇಕು. ನಾನು ಬೇರೆ ಕೇಳಲ್ಲ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ವಿರುದ್ಧ ಕಿಡಿಕಾರಿದ್ದಾರೆ.
ಕಚೇರಿ ಹೊರಗೆ ನೆಲದಲ್ಲಿ ಕುಳಿತಿದ್ದ ಭೋಜೇಗೌಡರನ್ನು ಸಮಾಧಾನಿಸಲು ಸ್ವತಃ ಜಿಲ್ಲಾಧಿಕಾರಿ ಬಂದಿದ್ದರು. ಅವರ ಮುಂದೆಯೇ ಭೋಜೇಗೌಡ, ಅಂಗಾರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ಸರಿ ಇದ್ದಾರೆ. ನಿಮ್ಮನ್ನು ಆಡಿಸುವ ಮಂದಿ ಸರಿ ಇಲ್ಲ ಎಂದು ಟೀಕಿಸಿದ್ದಾರೆ.
Posted by Headline Karnataka on Thursday, June 24, 2021
Chikmagalur S. L. Bhojegowda Slams Minister Angara for not calling him to the meeting and breaking the protocol.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm