ಬ್ರೇಕಿಂಗ್ ನ್ಯೂಸ್
25-06-21 04:34 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 25; ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೈಸೂರಿನ ಎನ್. ಆರ್. ಮೊಹಲ್ಲಾ ನಿವಾಸಿ ಕಾರ್ತಿಕ್ (30) ಮೃತ ಯುವಕ. ವೃತ್ತಿಯಲ್ಲಿ ಮೆಡಿಕಲ್ ರೆಪ್ರೆಂಸೆಂಟೇಟಿವ್ ಆಗಿದ್ದ ಕಾರ್ತಿಕ್ ಮಂಡ್ಯದ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮ ವಾಹಿನಿ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.
ತಂದೆ- ತಾಯಿಯನ್ನು ಕಳಕೊಂಡಿದ್ದ ಕಾರ್ತಿಕ್ ಚಿಕ್ಕಮ್ಮನ ಆಸರೆಯಲ್ಲಿದ್ದ. ಕೆಲಸ ಗಿಟ್ಟಿಸಿಕೊಂಡ ಬಳಿಕ ಎನ್.ಆರ್. ಮೊಹಲ್ಲಾದಲ್ಲಿ ಬಾಡಿಗೆ ರೂಂನಲ್ಲಿ ವಾಸವಿದ್ದ. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, 'ಸ್ನೇಹಿತರೇ ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇನ್ನು ಮುಂದೆ ನಾನು ನಿಮ್ಮೊಂದಿಗೆ ಇರುವುದಿಲ್ಲ' ಎಂದು ಬರೆದಿದ್ದಾನೆ.

3ನೇ ಬಾರಿ ಆತ್ಮಹತ್ಯೆ ಯತ್ನದಲ್ಲಿ ಸಾವು !
ಕಾರ್ತಿಕ್ ತಾಯಿ ಪಾರ್ವತಮ್ಮ 21 ವರ್ಷಗಳ ಹಿಂದೆ ತೀರಿಕೊಂಡಿದ್ದರು. ಕೌಟುಂಬಿಕ ಕಲಹದಲ್ಲಿ ತಂದೆಯೇ ತಾಯಿಯನ್ನು ಕೊಲೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ 14 ವರ್ಷಗಳ ಹಿಂದೆ ತಂದೆ ಶಿವನಂಜಯ್ಯ ಸಹ ಕುಡಿತದಿಂದ ಸಾವನ್ನಪ್ಪಿದ್ದರು. ಘಟನೆಯಿಂದ ಬೇಸತ್ತಿದ್ದ ಯುವಕ ತಾಯಿ ಸಾವನ್ನಪ್ಪಿದ ದಿನವೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ್ದು ಬಳಿಕ ಸ್ನೇಹಿತರ ನೆರವಿನಿಂದ ಬಚಾವಾಗಿದ್ದ. ಆನಂತರ ತಂದೆ ಸಾವನ್ನಪ್ಪಿದ ದಿನವೂ ರೈಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ, ಸಾವಿನಿಂದ ಬಚಾವಾಗಿದ್ದ. ಆದರೆ, ಮೂರನೇ ಬಾರಿಯ ಯತ್ನದಲ್ಲಿ ಪ್ರಾಣ ಪಕ್ಷಿಯೇ ಹೋಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30-year-old man Commits suicide in Mysore on his Birthday with a death note. The deceased has been identified as Karthik (30).
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 10:06 am
HK News Staffer
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm