ಬ್ರೇಕಿಂಗ್ ನ್ಯೂಸ್
27-06-21 12:42 pm Mangaluru Correspondent ಕರ್ನಾಟಕ
ಹೊನ್ನಾವರ, ಜೂ.26: ಕಾಸರಕೋಡು ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿ ಬಂದರಿಗೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಮೀನುಗಾರರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶಗೊಂಡು ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಕಾಸರಕೋಡು ಟೊಂಕಾ ಭಾಗದ ಶರಾವತಿ ನದಿ ಅಳಿವೆ ಪ್ರದೇಶದಲ್ಲಿ ಸುಮಾರು 600 ಕೋಟಿ ರೂ. ವೆಚ್ಚದಲ್ಲಿ ಹೊನ್ನಾವರ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ವಾಣಿಜ್ಯ ಬಂದರು ನಿರ್ಮಿಸುತ್ತಿದೆ. ಸರಕಾರ ವಾಣಿಜ್ಯ ಬಂದರು ನಿರ್ಮಾಣಕ್ಕೆ 93 ಎಕರೆ ಜಾಗವನ್ನು ಮಂಜೂರಿ ಮಾಡಿದೆ. ಕೆಲ ತಿಂಗಳ ಹಿಂದೆ ಕಾಮಗಾರಿ ಪ್ರಾರಂಭಿಸಿದ್ದ ಕಂಪೆನಿ ಸ್ಥಳೀಯರ ವಿರೋಧದಿಂದ ಸ್ಥಗಿತಗೊಳಿಸಿತ್ತು. ಆದರೆ, ಬೆಳ್ಳಂಬೆಳಗ್ಗೆ ಮತ್ತೆ ಸಾವಿರಾರು ಪೊಲೀಸರ ಭದ್ರತೆಯಲ್ಲಿ ಕಾಮಗಾರಿ ನಡೆಸಲು ಮುಂದಾಯಿತು.
ಶನಿವಾರ 500ಕ್ಕೂ ಹೆಚ್ಚು ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಮೂರು ಜೆಸಿಬಿಗಳ ಮೂಲಕ ಕಾರ್ಯಾಚರಣೆಗೆ ಇಳಿದ ಕಂಪೆನಿ, ಮೀನುಗಾರರ ಹತ್ತಾರು ಶೆಡ್‌ಗಳನ್ನು ಉರುಳಿಸಿದೆ. ಅದಲ್ಲದೆ, ಕಡಲ ತೀರದಂಚಿನ ಮರಗಳು, ತೆಂಗಿನ ಮರಗಳನ್ನು ನಾಶ ಮಾಡಿದೆ ಎಂದು ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ಆರಂಭಿಸಿದರು.
ಈ ವೇಳೆ ಮೀನುಗಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆಯಿತು. ಕೆಲ ಯುವಕರು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಮುಂದಾದರು. ತಕ್ಷಣ ಪೊಲೀಸರು, ಕರಾವಳಿ ಕಾವಲು ಪಡೆ ಸಿಬ್ಬಂದಿ ಧಾವಿಸಿ ಯುವಕರನ್ನು ಸಮುದ್ರದಿಂದ ಮೇಲಕ್ಕೆ ಕರೆತಂದಿದ್ದಾರೆ. ಪ್ರತಿಭಟನಾ ನಿರತ ಮೀನುಗಾರರು, ಮಹಿಳೆಯರನ್ನು ಪೊಲೀಸರ ಸಹಾಯದಿಂದ ಚದುರಿಸ ಲಾಯಿತು.
ಯಾವುದೇ ಮುನ್ಸೂಚನೆ ನೀಡದೇ ಬದುಕು ಕಟ್ಟಿಕೊಂಡಿದ್ದ ಶೆಡ್ ಗಳನ್ನು ಉರುಳಿಸುತ್ತಿದ್ದಾರೆ. ಬಡವರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ತಮ್ಮ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಮೀನುಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಾಸರಕೋಡು, ಮಲ್ಲುಕುರ್ವಾ ಪ್ರದೇಶದಲ್ಲಿ ಸುಮಾರು 600ಕ್ಕೂ ಹೆಚ್ಚು ಕುಟುಂಬಗಳು ಮೀನುಗಾರಿಕೆಯನ್ನು ನಂಬಿ ಬದುಕುತ್ತಿವೆ. ಸರಕಾರ ಸ್ಥಳೀಯರಿಗೆ ಸ್ಪಷ್ಟ ಮಾಹಿತಿ ನೀಡದೆ ಕಾಮಗಾರಿ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ನೆಪದಲ್ಲಿ ಮೀನುಗಾರರನ್ನು ಸಂಪೂರ್ಣ ಒಕ್ಕಲೆಬ್ಬಿಸುವ ಹುನ್ನಾರ ನಡೆಸಲಾಗಿದೆ. ಆದ್ದರಿಂದ ಕೂಡಲೇ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.
ಈ ಬಗ್ಗೆ ಉಪ ವಿಭಾಗಾಧಿಕಾರಿ ಮಮತಾ ದೇವಿ ಪ್ರತಿಕ್ರಿಯಿಸಿ, ಕಾಮಗಾರಿ ಬಗ್ಗೆ ಈ ಮೊದಲೇ ಸ್ಥಳೀಯ ಮೀನುಗಾರರೊಂದಿಗೆ ಸಭೆ ನಡೆಸಿ ತಿರ್ಮಾನ ಕೈಗೊಳ್ಳಲಾಗಿದೆ. ಜನರು ಮೊದಲಿನಿಂದಲೂ ವಾಸಿಸುತ್ತಿರುವ ಕಾರಣ ಸಹಜವಾಗಿ ಆತಂಕ ಇದೆ. ಆದರೆ, ಈಗಾಗಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಇಂದು ಕೇವಲ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಮಾತ್ರ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
Construction of a Private commercial port in Honnavar, fishermen oppose by protesting the construction of the port, Fishermen attempt to mass suicide to stop the work. Hundreds of police personnel were gathered.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm