ಬ್ರೇಕಿಂಗ್ ನ್ಯೂಸ್
28-06-21 10:54 am Headline Karnataka News Network ಕರ್ನಾಟಕ
ಹಾಸನ, ಜೂನ್ 28 : ಇಲ್ಲಿನ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮದ ಉದಯ್ ಎಂಬವರ ಇಬ್ಬರು ವಿವಾಹಿತ ಪುತ್ರಿಯರು 17 ದಿನಗಳ ಅಂತರದಲ್ಲಿ ನಿಗೂಢ ಸಾವು ಕಂಡಿದ್ದು, ವರದಕ್ಷಿಣೆ ಕಿರುಕುಳ, ಕೊಲೆ ಶಂಕೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.
ಸೌಂದರ್ಯ(21) ಮತ್ತು ಐಶ್ವರ್ಯ (19) ಕೆಲವೇ ದಿನಗಳಲ್ಲಿ ನಿಗೂಢ ಸಾವು ಕಂಡ ಸೋದರಿಯರು. ಉದಯ ಅವರಿಗೆ ನಾಲ್ವರು ಪುತ್ರಿಯರಿದ್ದು, ಈ ಪೈಕಿ ಎರಡನೇ ಮಗಳು ಐಶ್ವರ್ಯಾ ತುಮಕೂರಿನಲ್ಲಿ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದ್ದರೆ, 17 ದಿನಗಳಲ್ಲಿ ಹಿರಿಯ ಮಗಳೂ ಹೊಸನಗರದ ತನ್ನ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇನ್ನಿಬ್ಬರು ಪುತ್ರಿಯರು ಪಿಯುಸಿ ಹಾಗು ಎಸ್ಸೆಸೆಲ್ಸಿಯಲ್ಲಿ ಓದುತ್ತಿದ್ದಾರೆ.
ಪತ್ರಿಕೋದ್ಯಮ ವಿದ್ಯಾರ್ಥಿನಿಯಾಗಿದ್ದ ಸೌಂದರ್ಯಾ
ಹಿರಿಯ ಮಗಳು ಸೌಂದರ್ಯಾ ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಓದುತ್ತಿದ್ದಳು. ಹೀಗಾಗಿ ಓದು ಮುಗಿಸದೆ ಮದವೆಯಾಗಲ್ಲ ಎಂದು ನಿರಾಕರಿಸಿದ್ದಳು. ಆದರೆ, ಈ ನಡುವೆ ಈಕೆಯ ತಂಗಿ ಐಶ್ವರ್ಯಾಗೆ ಕಳೆದ ವರ್ಷ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಾವೇರಿಪುರ ನಿವಾಸಿ ನಾಗರಾಜು ಜೊತೆ ಮದುವೆ ಮಾಡಲಾಗಿತ್ತು. ನಾಗರಾಜು ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದು, ತುಮಕೂರು ನಗರದ ಸರಸ್ವತಿಪುರಂನಲ್ಲಿ ವಾಸವಾಗಿದ್ದರು.
ಆನಂತರ ತಂಗಿ ಮದುವೆಯಾದ ಬಳಿಕ ಮನೆಯಲ್ಲಿದ್ದ ಹಿರಿಯ ಮಗಳು ಸೌಂದರ್ಯಾ ಕಳೆದ ನವೆಂಬರ್ ತಿಂಗಳಲ್ಲಿ ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಾಡಿಗ್ಗೇರಿ ನಿವಾಸಿ ಉಮೇಶ್ ಎಂಬಾತನ ಜೊತೆ ಕುಟುಂಬದ ಹಿರಿಯರ ವಿರೋಧದ ನಡುವೆಯೇ ಮದುವೆ ಆಗಿದ್ದಳು ಎಂದು ಸ್ಥಳೀಯರು ತಿಳಿಸಿದ್ದಾರೆ. ಮದುವೆ ನಂತರ ಗಂಡನ ಮನೆ ಸೇರಿದ್ದ ಅಕ್ಕ ತಂಗಿಯರಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.
ಜೂ.8ರಂದು ಐಶ್ವರ್ಯ ಸಾವು
ಈ ನಡುವೆ, 2021ರ ಜೂ.8ರಂದು ತುಮಕೂರಿನ ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಐಶ್ವರ್ಯಾ ಶವ ಪತ್ತೆಯಾಗಿತ್ತು. ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ಕೊಡುತ್ತಿದ್ದರು. ಐಶ್ವರ್ಯಳನ್ನು ಆಕೆಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತಳ ಪಾಲಕರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು.
ಎರಡೇ ವಾರದ ಅಂತರದಲ್ಲಿ ಸೌಂದರ್ಯ ಸಾವು !
ತಂಗಿ ಸಾವಿನ ಬಗ್ಗೆ ದೂರು, ಆರೋಪ ಕೇಳಿಬರುತ್ತಿರುವ ಮಧ್ಯೆಯೇ ಅತ್ತ ಜೂ. 25ರಂದು ಅಕ್ಕ ಸೌಂದರ್ಯಾ ಕೂಡ ತನ್ನ ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಾಳೆ. ಮಗಳ ಸಾವಿನಿಂದ ಆಕ್ರೋಶಗೊಂಡ ಆಕೆಯ ಪಾಲಕರು ಪತಿ ಉಮೇಶನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಆತನ ಮನೆ ಎದುರಲ್ಲೇ ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದರು. ಆದರೆ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆಗೈದು ಫ್ಯಾನ್ ಗೆ ನೇತು ಹಾಕಿದ್ದಾರೆ ಎಂದು ಮೃತಳ ತಂದೆ ಉದಯ್ ಆರೋಪಿಸಿದ್ದಾರೆ. ಮಗಳ ಸಾವಿಗೆ ಉಮೇಶ್, ಆತನ ತಂದೆ ಪಾಂಡುರಂಗ, ತಾಯಿ ಶಾಂತಮ್ಮ, ಸಹೋದರಿ ರೂಪಾ ಕಾರಣ. ಬೇರೆ ಜಾತಿ ಎಂಬ ಕಾರಣಕ್ಕೆ ನನ್ನ ಮಗಳಿಗೆ ಹಿಂಸೆ ನೀಡಿದ್ದಾರೆ. ಅಲ್ಲದೆ ಉಮೇಶನಿಗೆ ಬೇರೊಂದು ಮದುವೆ ಮಾಡಲು ಯೋಜನೆ ಮಾಡಿದ್ದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
In a heart-wrenching incident, two sisters, both of who were married, ended their lives within 17 days of each other. Their parents have alleged that they were harassed for dowry by their respective in-laws and cases have been filed in this regard.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm