ಬ್ರೇಕಿಂಗ್ ನ್ಯೂಸ್
28-06-21 03:00 pm Headline Karnataka News Network ಕರ್ನಾಟಕ
ಬೆಂಗಳೂರು, ಜೂ.28 : ಕಡೆಗೂ ರಾಜ್ಯದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಚುಟುಕಾಗಿ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದೆ. ಜುಲೈ 19 ಮತ್ತು 22ರಂದು ಎರಡೇ ಹಂತದಲ್ಲಿ ಎಲ್ಲ ಪರೀಕ್ಷೆಗಳನ್ನು ಮುಗಿಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ರಾಜ್ಯದ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಾಲೆ ಆರಂಭ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ರಾಜ್ಯ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಶಿಕ್ಷಣ ಸಚಿವರು ಮಾಧ್ಯಮಕ್ಕೆ ವಿವರಣೆ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ ವರ್ಷವೂ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿ ಪ್ರಶಂಸೆಗೆ ಒಳಗಾಗಿದ್ದೇವೆ. ಕಳೆದ ವರ್ಷ 8 ಲಕ್ಷ ಮಂದಿ ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಳೆದ ವರ್ಷ 40 ಸಾವಿರ ಕೊಠಡಿಗಳನ್ನು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಬಳಸಲಾಗಿತ್ತು. ಈ ಬಾರಿ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಸಲಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದರು.
ಎರಡು ಹಂತದ ಪರೀಕ್ಷೆ ಹೇಗಿರುತ್ತೆ
ಜುಲೈ 19 ರಂದು ಪ್ರಮುಖ ವಿಷಯಗಳಾದ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಆಧಾರಿತ ಒಂದು ಪ್ರಶ್ನೆ ಪತ್ರಿಕೆ ಸಂಬಂಧಿಸಿ ಪರೀಕ್ಷೆ ನಡೆಸಲಾಗುವುದು. ಬೆಳಗ್ಗೆ 10.30 ರಿಂದ 1.30ರ ವರೆಗೆ ಪರೀಕ್ಷೆ ಇರಲಿದ್ದು, ಏಕಕಾಲದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಅಲ್ಲದೆ, ಜುಲೈ 22 ರಂದು ಮೂರು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಮೂರು ಭಾಷಾ ವಿಷಯಗಳನ್ನು ಆಧರಿಸಿ ಒಂದು ಪ್ರಶ್ನೆಪತ್ರಿಕೆ ನೀಡಲಾಗುವುದು. ಕಳೆದ ವರ್ಷದ ರೀತಿಯಲ್ಲೇ ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿದ್ದೇವೆ. ಜೂನ್ 30 ರಿಂದ ಪ್ರವೇಶ ಪತ್ರ ನೀಡಲಿದ್ದು, ವಿದ್ಯಾರ್ಥಿಗಳು ತಾವೇ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸುರೇಶ್ ಕುಮಾರ್ ತಿಳಿಸಿದರು.
ಎಲ್ಲರಿಗೂ ಮಾಸ್ಕ್ ವಿತರಣೆ
ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಬಟ್ಟೆ ಮಾಸ್ಕ್ ಇಲ್ಲವೇ N 95 ಮಾಸ್ಕ್ ಧರಿಸಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ಪರೀಕ್ಷಾ ಕೇಂದ್ರಕ್ಕೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಂದು ಪರೀಕ್ಷೆ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪ್ರಶ್ನೆಪತ್ರಿಕೆ ಲೀಕ್ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬಾರದು. ಪ್ರಶ್ನೆ ಪತ್ರಿಕೆ ಸುರಕ್ಷತೆ, ಭದ್ರತೆ ಕುರಿತು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಈ ಬಾರಿಯ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದರು.
Karnataka SSLC Exams 2021 timetable has been released. The State Government has announced the Secondary School Leaving Certificate, SSLC Exams 2021 dates. In view of the pandemic, SSLC would be conducted only on two days. One Paper for three subjects, Maths, Science and Social Sciences would be held on July 19 and the exams for languages would be conducted on July 22, 2021. Hall Tickets to be released on June 30.
25-11-24 05:51 pm
Bangalore Correspondent
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 11:14 pm
Mangalore Correspondent
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
25-11-24 06:17 pm
HK News Desk
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm