ಬ್ರೇಕಿಂಗ್ ನ್ಯೂಸ್
01-07-21 03:17 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 1: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 130 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
‘ವರಿಷ್ಠರು ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುವೆ’ ಎಂದು ತಿಂಗಳ ಹಿಂದಷ್ಟೇ ಹೇಳಿದ್ದ ಯಡಿಯೂರಪ್ಪ, ಈಗ ತದ್ವಿರುದ್ಧ ರೀತಿಯ ಹೇಳಿಕೆ ಕೊಟ್ಟು ಅಚ್ಚರಿ ಸೃಷ್ಟಿಸಿದ್ದಾರೆ. ಇನ್ನೂ ಉತ್ತಮ ಕೆಲಸಗಳನ್ನು ಎರಡು ವರ್ಷಗಳಲ್ಲಿ ಮಾಡಬೇಕಾಗಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಲುವಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತೇನೆ ಎಂದು ಕಾರ್ಯಕರ್ತರಿಗೆ ಮತ್ತು ರಾಜ್ಯದ ಜನರಿಗೆ ಭರವಸೆ ನೀಡುತ್ತೇನೆ ಎಂದು ದಿಢೀರ್ ಹೇಳಿಕೆ ನೀಡಿರುವುದು ಜಿಜ್ಞಾಸೆಗೆ ಗ್ರಾಸವಾಗಿದೆ.
ರಾಜಭವನಕ್ಕೆ ಬುಧವಾರ ಸಂಜೆ ಭೇಟಿ ನೀಡಿದ್ದ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಲ್ಲಿಂದ ಹಿಂತಿರುಗುವ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.
ನಾಯಕತ್ವ ಬದಲಾವಣೆ ವಿಚಾರದಲ್ಲಿ ‘ಪರೀಕ್ಷೆ ಬರೆದಿದ್ದು, ಫಲಿತಾಂಶವಷ್ಟೇ ಬಾಕಿ’ ಎಂದು ಯಡಿಯೂರಪ್ಪ ವಿರೋಧಿ ಬಣದಲ್ಲಿರುವ ಸಚಿವ ಸಿ.ಪಿ. ಯೋಗೇಶ್ವರ್ ಹೇಳುತ್ತಲೇ ಬಂದಿದ್ದಾರೆ. ಇದರ ಮಧ್ಯೆಯೇ, ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ ಎಂದು ಅವರ ಮಗ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಯಡಿಯೂರಪ್ಪ, ಮುಂದಿನ ಚುನಾವಣೆಯ ನಾಯಕತ್ವವೂ ತಮ್ಮದೇ ಎಂದು ಪರೋಕ್ಷವಾಗಿ ಹೇಳಿರುವುದು ನಾನಾ ರೀತಿಯ ವಿಶ್ಲೇಷಣೆಗೂ ಕಾರಣವಾಗಿದೆ. ಹೀಗೆ ಹೇಳುವ ಮೂಲಕ ‘ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ಅವರು ವರಿಷ್ಠರಿಗೆ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯದಲ್ಲಿ ಗೊಂದಲ ಮುಂದುವರಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸುತ್ತಾ ಮುಂದೆ ನಡೆದರು.
Karnataka Chief Minister B S Yediyurappa on Wednesday made an unscheduled visit to Raj Bhavan and met Vajubhai R Vala, after which he said he would work towards bringing the BJP back to power with 130 seats in the next election.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm