ಬ್ರೇಕಿಂಗ್ ನ್ಯೂಸ್
04-07-21 04:08 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 4: ಮುಂದಿನ ಬಾರಿಯೂ ಎಚ್ಡಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ ಎನ್ನಲಾಗುತ್ತಿದ್ದು ರಾಜಕೀಯ ವಲಯದಲ್ಲಿ ಮತ್ತೆ ಸದ್ದು ಮಾಡತೊಡಗಿದೆ.
ಜೆಡಿಎಸ್ ನಾಯಕ, ಮಾಜಿ ಪರಿಷತ್ ಸದಸ್ಯ ಶರವಣ ಮನೆಗೆ ಶುಕ್ರವಾರ ವಿನಯ್ ಗುರೂಜಿ ಭೇಟಿ ನೀಡಿದ್ದರು. ಈ ವೇಳೆ, ಶರವಣ ರಾಜ್ಯ ರಾಜಕಾರಣದ ಕುರಿತು ಚರ್ಚೆಯನ್ನೂ ನಡೆಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಶರವಣ ಮನೆಗೆ ಬಂದಿದ್ದು ವಿನಯ್ ಗುರೂಜಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ವಿನಯ ಗುರೂಜಿ, ರಾಜ್ಯದಲ್ಲಿ ಮತ್ತೊಮ್ಮೆ ಜೆಡಿಎಸ್ ಅಧಿಕಾರ ನಡೆಸುತ್ತದೆ. ಮುಂದಿನ ಬಾರಿಯೂ ಮುಖ್ಯಮಂತ್ರಿಯಾಗುವ ಯೋಗ ಕುಮಾರಸ್ವಾಮಿ ಅವರಿಗೆ ಇದೆ ಎಂದು ತಿಳಿಸಿದ್ದಾರೆ.
ಗೌರಿಗದ್ದೆಯ ವಿನಯ್ ಗುರೂಜಿ ಭವಿಷ್ಯ ನಿಜವಾಗತ್ತದೆ ಎಂಬ ಮಾತು ರಾಜಕೀಯ ವಲಯದಲ್ಲಿದೆ. ಇದೇ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ವಿನಯ್ ಗುರೂಜಿ ಭಕ್ತರಾಗಿದ್ದು, ಅವರ ಆಶೀರ್ವಾದ ಪಡೆಯುತ್ತಲೇ ಇರುತ್ತಾರೆ.
ಚಿಕ್ಕ ವಯಸ್ಸಾದರೂ ವಿನಯ್ ಹೇಳುವ ಮಾತುಗಳೆಲ್ಲ ಸತ್ಯವಾಗಿದ್ದನ್ನು ತಿಳಿದು ಅನೇಕರು ಅವರ ಮಾತುಗಳನ್ನು ನಂಬತೊಡಗಿದ್ದಾರೆ. ಇದೇ ಕಾರಣಕ್ಕೆ ಮಾಜಿ ಪ್ರಧಾನಿ ದೇವೆಗೌಡ, ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ನಾಯಕರು ಕೂಡ ಅವರ ಮಾರ್ಗದರ್ಶನ ಪಡೆಯೋದನ್ನು ಆರಂಭಿಸಿದ್ದಾರೆ.
ಹಿಂದೆ ನುಡಿದ ಭವಿಷ್ಯವೂ ನಿಜವಾಗಿತ್ತು !
2018ರಲ್ಲಿ ಕುಮಾರಸ್ವಾಮಿ ಸಿಎಂ ಆಗುತ್ತಾರೆ ಹಾಗೂ ಜೆಡಿಎಸ್ಗೆ 40ಕ್ಕಿಂತ ಕಡಿಮೆ ಸ್ಥಾನಗಳು ಬರುತ್ತದೆ ಎಂದು ವಿನಯ್ ಗುರೂಜಿ ಹೇಳಿದ್ದು ಚುನಾವಣೆ ಬಳಿಕ ನಿಜವಾಗಿತ್ತು. ಇದೇ ಕಾರಣಕ್ಕೆ ಮೈತ್ರಿ ಸರ್ಕಾರದ ರಚನೆ ಆದ ಸಂದರ್ಭದಲ್ಲಿ ವಿನಯ್ ಗುರೂಜಿ ಅವರನ್ನು ಮನೆಗೆ ಕರೆಸಿಕೊಂಡು ದೇವೇಗೌಡ ಆಶೀರ್ವಾದ ಪಡೆದು ಸತ್ಕರಿಸಿದ್ದರು.
HD Kumaraswamy to be the next cm of Karnataka prophesizes Vinaya Guruji when HDK met him at his residence in Bangalore.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm