ಬ್ರೇಕಿಂಗ್ ನ್ಯೂಸ್
06-07-21 11:34 am Headline Karnataka News Network ಕರ್ನಾಟಕ
ಬಾಗಲಕೋಟೆ, ಜುಲೈ 6: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಬೈಕ್ ಸವಾರ ಕೂಡಲೆಪ್ಪ ಬೋಳಿ(58ವ) ತೀವ್ರ ಗಾಯಗೊಂಡು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ಸಂಭವಿಸಿದೆ.
ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಚಿದಾನಂದ ಅವರ ಕಾರು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಗುದ್ದಿದೆ. ಮೃತರು ಬಾಗಲಕೋಟೆ ತಾಲ್ಲೂಕಿನ ಚಿಕ್ಕಹಂಡರಗಲ್ ನಿವಾಸಿಯೆಂದು ಗುರುತಿಸಲಾಗಿದೆ.
ಮೃತರ ಸಂಬಂಧಿಕರು ಆಕ್ರೋಶ:
ಮಂತ್ರಿಗಳ ಮಕ್ಕಳು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ಸಾಕ್ಷಿಗಳನ್ನು ನಾಶಪಡಿಸಲು ನೋಡುತ್ತಿದ್ದಾರೆ, ಅವರು ಕಾರಿನ ನಂಬರ್ ಪ್ಲೇಟ್ ನ್ನು ಜಖಂಗೊಳಿಸಿದ್ದಲ್ಲದೆ, ಆವಾಜ್ ಹಾಕಿದ್ದಾರೆ, ಘಟನೆಯನ್ನು ಸೆರೆಹಿಡಿಯಲು ಯತ್ನಿಸಿದವರ ಮೊಬೈಲ್ ಗಳನ್ನು ಕಿತ್ತುಕೊಂಡಿದ್ದಾರೆ ಎಂದು ಮೃತರ ಸಂಬಂಧಿ ಆರೋಪಿಸಿದ್ದಾರೆ.
ಬಾಗಲಕೋಟೆಯ ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಮೃತ ಕೂಡಲೆಪ್ಪ ಬೋಳಿ ಅವರ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅವರ ಸಂಬಂಧಿಕ ಸಿದ್ದಪ್ಪ ಮಾತನಾಡಿ, ಇವರಿಗೆ ಬಡವರು, ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಚಿದಾನಂದ ಸವದಿಯವರು ತಮ್ಮ ಗಾಡಿಯ ನಂಬರ್ ಪ್ಲೇಟ್ ನ್ನು ಮುರಿದು ಅದರಲ್ಲಿರುವ ದಾಖಲೆಗಳನ್ನು ಮತ್ತು ಜನರನ್ನು ಮುಂದಿನ ಗಾಡಿಗೆ ಹಾಕಿ ಕಳುಹಿಸಿದ್ದಾರೆ. ಅಪಘಾತವಾದ ಕಾರಿನ ಫೋಟೋ, ವಿಡಿಯೊ ಸೆರೆಹಿಡಿಯುತ್ತಿದ್ದವರಿಗೆ ಬೈದು ಮೊಬೈಲ್ ಕಿತ್ತುಕೊಂಡರು, ಪೊಲೀಸರು ಬರುವ ಹೊತ್ತಿಗೆ ಪರಾರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಅಪಘಾತವಾದ ಕಾರು ನನ್ನದೇ, ಅದರಲ್ಲಿ ನಾನಿರಲಿಲ್ಲ :
ನಾನು ಮುಂದಿದ್ದ ಸ್ನೇಹಿತರ ಕಾರಲ್ಲಿದ್ದೆ. ನನ್ನ ಕಾರ್‌ನಲ್ಲಿ ನನ್ನ ಚಾಲಕ ಹಾಗೂ ಮೂವರು ಸ್ನೇಹಿತರು ಇದ್ದರು. ದ್ವಿಚಕ್ರವಾಹನ ಸವಾರ ಏಕಾಏಕಿ ಅಡ್ಡ ಬಂದಿದ್ದರಿಂದ ಅಪಘಾತವಾಗಿದೆ ಎಂದು ಚಾಲಕ ತಿಳಿಸಿದ. ಆಗ ನಮ್ಮ ಕಾರು ಸುಮಾರು ಮೂವತ್ತು ಕಿ.ಮೀ. ದೂರದಲ್ಲಿತ್ತು ಎಂದು ಹೇಳಿದರು.
ಚಾಲಕ ಮಾಹಿತಿ ಕೊಡುತ್ತಿದ್ದಂತೆಯೇ ನಾನೇ ಆಂಬುಲೆನ್ಸ್ ವ್ಯವಸ್ಥೆ ಮಾಡಿಸಿದೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿದ್ದೆ. ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿದ್ದೆ. ಬೇರೆ ಆಸ್ಪತ್ರೆಯಲ್ಲಿ ಆಮ್ಲಜನಕ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದರು. ರಾತ್ರಿ 8ಕ್ಕೆ ಕರೆ ಮಾಡಿದಾಗ ಸಾವಿಗೀಡಾದ ಸುದ್ದಿ ತಿಳಿಸಿದರು ಎಂದರು.
ನಾವು ಅಪಘಾತ ಸ್ಥಳಕ್ಕೆ ವಾಪಸಾಗುವ ವೇಳೆಗೆ ಅಲ್ಲಿ ಯಾರೂ ಇರಲಿಲ್ಲ. ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ಹೋಗಲು ಒಂದು ತಾಸು ಬೇಕಾಯಿತು. ಬಾಗಲಕೋಟೆ ಎಸ್ಪಿ ಜೊತೆಗೂ ಮಾತನಾಡಿದ್ದೆ. ಕಾರಿನ ನಂಬರ್ ಪ್ಲೇಟ್ ಬದಲಿಸಿದ ವಿಷಯ ನನಗೆ ಗೊತ್ತಿಲ್ಲ ಎಂದರು.
ಯಾರಿಗೂ ಧಮಕಿ ಹಾಕುವ ಪ್ರಶ್ನೆಯೇ ಇಲ್ಲ. ಜೀವ ಎಂದರೆ ಎಲ್ಲರಿಗೂ ಒಂದೆ. ಡಿಸಿಎಂ ಪುತ್ರ ಎಂಬ ಕಾರಣಕ್ಕೆ ಮಾನವೀಯತೆ ಬಿಡಲಾಗುವುದಿಲ್ಲ. ಯಾರೊಂದಿಗೂ ವಾಗ್ವಾದ ನಡೆಸಿಲ್ಲ. ಆರೋಪಿಸಿದವರು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಆಸ್ಪತ್ರೆ ಬಳಿ ಕುಟುಂಬದವರಾರೂ ನನಗೆ ಭೇಟಿಯಾಗಲಿಲ್ಲ. ಆ ಕುಟುಂಬದವರ ಮನೆಗೆ ಹೋಗಿ ಸಾಂತ್ವನ ಹೇಳುತ್ತೇನೆ ಎಂದು ತಿಳಿಸಿದರು.
DCM Laxman Savadi’s son’s car rams into bike killing 58-year-old rider in Bagalkot
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm