ಬ್ರೇಕಿಂಗ್ ನ್ಯೂಸ್
10-07-21 10:47 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 10: ರಾಜ್ಯದಲ್ಲಿ ಜುಲೈ 14ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ, ರಾಜ್ಯದಲ್ಲಿ ನೈಋತ್ಯ ಮುಂಗಾರು ಕ್ರಮೇಣವಾಗಿ ಚುರುಕುಪಡೆಯುತ್ತಿದೆ.
ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದೆ. ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪಣಂಬೂರಿನಲ್ಲಿ 15 ಸೆಂ.ಮೀ ಮಳೆ ಸುರಿದಿದೆ. ಮಂಗಳೂರು, ಭಟ್ಕಳ, ಶಿರಾಲಿ, ಧರ್ಮಸ್ಥಳ, ಹುಂಚದಕಟ್ಟೆ, ಕೋಟ, ಶಿನಿವಾಸಪುರ, ಕದ್ರ, ಕಾರ್ಕಳ, ಮಾಣಿ, ಕೊಲ್ಲೂರು, ಭರಮಸಾಗರ, ಬಾದಾಮಿ, ಮಂಕಿ, ಸಿದ್ದಾಪುರ, ಮೂಡುಬಿದಿರೆ, ಬೀದರ್, ತಾಳಗುಪ್ಪ, ಲಿಂಗನಮಕ್ಕಿ, ಶಿವಮೊಗ್ಗ, ಆಗುಂಬೆ, ಶೃಂಗೇರಿ, ಆನವಟ್ಟಿಯಲ್ಲಿ ಮಳೆಯಾಗಿದೆ.
ಮುಂದಿನ 5 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 10-14ರವರೆಗೆ ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಸತತ ಮಳೆಯು ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ಕಡಿಮೆಯಾಗಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ನದಿ ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ಕೃಷಿಕರಲ್ಲಿ ಹರ್ಷ ವ್ಯಕ್ತವಾಗಿದೆ.
The India Meteorological Department (IMD) issued red and orange alerts for Karnataka on Friday following widespread rainfall in Karnataka’s coastal regions.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm