ಬ್ರೇಕಿಂಗ್ ನ್ಯೂಸ್
13-07-21 12:23 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 13 : ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳೀಕರಣ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪಿಣರಾಯಿ ವಿಜಯನ್ ಉತ್ತರ ನೀಡಿದ್ದು ಕಾಸರಗೋಡು ಜಿಲ್ಲೆಯ ಯಾವುದೇ ಹಳ್ಳಿಯ ಹೆಸರನ್ನು ಬದಲಾಯಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ತಿಳಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಕನ್ನಡ ಹೆಸರನ್ನು ಮಲಯಾಳೀಕರಣ ಮಾಡುವ ಪ್ರಯತ್ನ ಮರುಕಳಿಸದಂತೆ ಅಲ್ಲಿನ ಸ್ಥಳೀಯ ಸಂಸ್ಥೆಗಳು ಹಾಗೂ ಅಧಿಕಾರಿಗಳಿಗೆ ತಾಕೀತು ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಪಿಣರಾಯಿ ವಿಜಯ್ ಅವರಿಗೆ ಪತ್ರವನ್ನು ಬರೆದು ಆಗ್ರಹಿಸಿದ್ದರು.
ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಮತ್ತು ಮಲಯಾಳಂ ಭಾಷಿಗರು ಸೌಹಾರ್ದದಿಂದ ಜೀವಿಸುತ್ತಿದ್ದಾರೆ. ಇಂತಹ ಪ್ರಯತ್ನಗಳು ಸೌಹಾರ್ದ ಕದಡುತ್ತವೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದರು. ಇದೀಗ ಈ ಪತ್ರಕ್ಕೆ ಪಿಣರಾಯಿ ವಿಜಯನ್ ಉತ್ತರ ನೀಡಿದ್ದಾರೆ.
ಕಾಸರಗೋಡು ಜಿಲ್ಲೆಯ ಯಾವುದೇ ಹಳ್ಳಿಯ ಹೆಸರನ್ನು ಬದಲಾಯಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಾಗಿಲ್ಲ. ನೀವು ವ್ಯಕ್ತಪಡಿಸಿದ ಭಾವನೆಗಳನ್ನು ನಾವು ಸಂಪೂರ್ಣವಾಗಿ ಪ್ರಶಂಸಿಸುತ್ತೇವೆ.
ಎರಡೂ ರಾಜ್ಯಗಳ ಜನರಲ್ಲಿ ಸಾಮರಸ್ಯ ಮತ್ತು ಬಾಂಧವ್ಯವನ್ನು ಬಲಪಡಿಸುವುದು ಅಗತ್ಯವಾಗಿದೆ. ಕೊರೊನಾ ಸಾಂಕ್ರಾಮಿಕದ ಪರಿಣಾಮ ನಮ್ಮ ರಾಜ್ಯದಲ್ಲಿ ಎಲ್ಲಾ ಶಾಲೆಗಳು ಮುಚ್ಚಲ್ಪಟ್ಟಿವೆ ಮತ್ತು ತರಗತಿಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ. ಕಾಸರಗೋಡು ಭಾಗದಲ್ಲಿ ಸ್ಥಳೀಯ ಕೇಬಲ್ ಚಾನೆಲ್‌ಗಳ ಮೂಲಕ ಕನ್ನಡ ಮಾಧ್ಯಮದಲ್ಲಿ ತರಗತಿಗಳು ನಡೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಿಣರಾಯಿ ವಿಜಯನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Read: ಗಡಿಭಾಗದ ಕನ್ನಡದ ಹೆಸರಿಗೆ ಆಪತ್ತು ; ಕಾಸರಗೋಡಿನಲ್ಲಿ ಹೆಸರಿಗೂ ಬಂತು ಮಲಯಾಳೀಕರಣದ ಗಂಧ !
The issue of Kerala reportedly planning to rename some villages in the northern part of that state refuses to die down despite denials by the local authorities there. On Tuesday, Opposition leader Siddaramaiah wrote a letter to Kerala Chief Minister Pinarayi Vijayan urging his government not to change the names of places. In response to the letter the CM has stated that no such measures of changing the name has been initiated he said.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm