ಬ್ರೇಕಿಂಗ್ ನ್ಯೂಸ್
13-07-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 13: ಕೊರೊನಾ ಆತಂಕದ ನಡುವೆಯೂ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆಗಳು ನಡೆಯಲಿವೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್ಟಿಸಿ) ಆದೇಶ ನೀಡಿತ್ತು. ಈಗ ಬಿಎಂಟಿಸಿ ಕೂಡ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿದಂತಾಗಿದೆ.



ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಈ ಅನುಮತಿ ನೀಡಲಾಗಿದೆ. ರಸ್ತೆ ಮಧ್ಯೆದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷೆ ಪ್ರವೇಶ ಪತ್ರ ಹೊಂದಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
ಕೆಎಸ್‌ಆರ್ಟಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಈಗಾಗಲೇ ಆದೇಶ ಹೊರಡಿಸಿದೆ. ಹಾಗೆಯೇ ಬಿಎಂಟಿಸಿ ಬೆಂಗಳೂರು ನಗರದ ಒಳಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡಿದ್ದು, ಹಾಲ್ ಟಿಕೆಟ್ ತೋರಿಸುವುದು ಕಡ್ಡಾಯ.
ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣವನ್ನು ಅನುಮತಿಸಲು ಸಾರಿಗೆ ಸಂಸ್ಥೆಗಳು ನಿಗಮದ ಎಲ್ಲಾ ಚಾಲಕ/ನಿರ್ವಾಹಕರುಗಳಿಗೆ ಸೂಚಿಸಿವೆ.
Considering the needs of the students appearing for SSLC examinations, the Karnataka government has announced free travel for them in State Road Transport Corporation (KSRTC) buses in the state.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 06:39 pm
Mangalore Correspondent
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
04-12-25 04:18 pm
Bangalore Correspondent
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm