ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ ; ವ್ಯವಸ್ಥೆ ಹೇಗಿದೆ ? ಫುಲ್ ಡೀಟೆಲ್ಸ್...

18-07-21 03:27 pm       Headline Karnataka News Network   ಕರ್ನಾಟಕ

ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸೋಕೆ ಸಜ್ಜಾಗಿದೆ. ನಾಳೆಯಿಂದ ರಾಜ್ಯದಲ್ಲಿ 2020-21 ನೇ ಸಾಲಿನ SSLC ಪರೀಕ್ಷೆ ಪ್ರಾರಂಭವಾಗಲಿದೆ.

Photo credits : NDTV

ಬೆಂಗಳೂರು, ಜು. 18: ಕೊರೊನಾ ಭೀತಿಯ ನಡುವೆಯೇ ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸೋಕೆ ಸಜ್ಜಾಗಿದೆ. ನಾಳೆಯಿಂದ ರಾಜ್ಯದಲ್ಲಿ 2020-21 ನೇ ಸಾಲಿನ SSLC ಪರೀಕ್ಷೆ ಪ್ರಾರಂಭವಾಗಲಿದೆ. ನೂತನ ವಿಧಾನದಲ್ಲಿ ಎರಡು ದಿನಗಳ ಕಾಲ ಪರೀಕ್ಷೆ ನಡೆಯಲಿದೆ. ಸದ್ಯ ಶಿಕ್ಷಣ ಇಲಾಖೆ ಪರೀಕ್ಷಾ ಸಿದ್ಧತೆ ಪೂರ್ಣಗೊಳಿಸಿದ್ದು ಕೊರೋನಾ ಮಾರ್ಗಸೂಚಿಯೊಂದಿಗೆ ಪರೀಕ್ಷೆ ನಡೆಯಲಿದೆ. ಸೋಂಕಿತರಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೊಠಡಿ ವ್ಯವಸ್ಥೆ ಕೂಡಾ ಮಾಡಲಾಗಿದೆ. ಇನ್ನು ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನ ರೆಡಿ ಇರಲಿದ್ದು ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಮತ್ತು ಪ್ರತೀ ವಿದ್ಯಾರ್ಥಿಗೆ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಕಡ್ಡಾಯ ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 8 ಲಕ್ಷದ 76 ಸಾವಿರದ 581 ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಬಾಲಕರು 4 ಲಕ್ಷದ 72 ಸಾವಿರ 643 ಇದ್ದರೆ ಬಾಲಕಿಯರು 4 ಲಕ್ಷದ 3 ಸಾವಿರದ 938 ಇದ್ದಾರೆ. ಇನ್ನು ಪ್ರೆಶರ್ಸ್ ವಿದ್ಯಾರ್ಥಿಗಳು 7 ಲಕ್ಷದ 83 ಸಾವಿರದ 955 ಇದ್ದು ಪುನಾವರ್ತಿತ ವಿದ್ಯಾರ್ಥಿಗಳು 977 ವಿದ್ಯಾರ್ಥಿಗಳು ಇದ್ದಾರೆ. 21 ಸಾವಿರದ 817 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಖಾಸಗಿ ‌ಪುನರಾವರ್ತಿತ ವಿದ್ಯಾರ್ಥಿಗಳು 9419 ಇದ್ದಾರೆ. ರಾಜ್ಯಾದ್ಯಂತ ಒ ಟ್ಟು 4884 ಪರೀಕ್ಷಾ ಕೇಂದ್ರಗಳ ಸ್ಥಾಪನೆಯಾಗಿದ್ದು ಒಟ್ಟು 73 ಸಾವಿರದ 66 ಪರೀಕ್ಷಾ ಕೊಠಡಿಗಳು ಇರಲಿದೆ. ಇನ್ನು ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಇರಲಿದೆ. ನಾಳೆ ಜುಲೈ 19 ಮತ್ತು ಜುಲೈ 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ.

ಇದೇ ಮೊದಲ ಬಾರಿ ವಿಶಿಷ್ಟ ರೀತಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. KPSC ಮಾದರಿಯಲ್ಲಿ SSLC ಪರೀಕ್ಷೆ ನಡೆಯಲಿದೆ. ಒಟ್ಟು 40 ಅಂಕಗಳಿಗೆ ಪರೀಕ್ಷೆ ಇರಲಿದ್ದು ಮೂರು ಗಂಟೆ ಅವಧಿಯಲ್ಲಿ ‌ಮೂರು ವಿಷಯಗಳಿಗೆ ಪರೀಕ್ಷೆ ಬರೆಯಬೇಕಿದೆ. ಒಂದು ಕೊಠಡಿಯಲ್ಲಿ 10 ರಿಂದ 12 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ. 1 ಲಕ್ಷದ 30 ಸಾವಿರ ಸಿಬ್ಬಂದಿಗಳನ್ನ ಪರೀಕ್ಷಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಗೆ ಹಾಜರು ಇರಬೇಕು ಎಂದು ತಿಳಿಸಲಾಗಿದೆ. ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆ ನಡೆಯಲಿದೆ.

ರಾಜ್ಯದ ನಾನಾ ಭಾಗಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕ್ಷಣಗಣನೆ ಶುರುವಾಗಿದ್ದು ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹುಬ್ಬಳ್ಳಿಯಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ  ಈಗಾಗಲೇ ಸ್ಯಾನಿಟೈಜೇಶನ್ ಮಾಡಲಾಗಿದ್ದು ಪ್ರತಿ ಟೇಬಲ್ ನಲ್ಲಿ ಒಬ್ಬರಿಗೆ ಕೂರಲು ಅವಕಾಶ ಕಲ್ಪಿಸಲಾಗಿದೆ. ಟೇಬಲ್ ಗಳ ಮೇಲೆ ರೆಜಿಸ್ಟ್ರೇಷನ್ ನಂಬರ್ ಹಾಕಿದ್ದು ಶಾಲೆಗೆ ಎಂಟ್ರಿ ಆಗುತ್ತಿದ್ದಂತೆಯೇ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಜೇಶನ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆಯ ಎಂಟ್ರೆನ್ಸ್ ನಲ್ಲಿ ವಿದ್ಯಾರ್ಥಿಗಳ ಸಾಮಾಜಿಕ ಅಂತರಕ್ಕೆ ಮಾರ್ಕ್ ಮಾಡಲಾಗಿದ್ದು ಪ್ರತಿ ಕೇಂದ್ರದಲ್ಲಿಯೂ ಎರಡು ಐಸೋಲೇಷನ್ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಜ್ವರ ಬಂದವರು, ಕೋವಿಡ್ ಆದವರಿದ್ದರೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಪರಿಶೀಲಿಸಿಕೊಂಡು ಹೋಗುತ್ತಿದ್ದಾರೆ.

The Karnataka Government will conduct the Secondary School Leaving Certificate (SSLC), or Class 10th exam for the current academic year on July 19 and 22. While tomorrow, on July 19, the core subject exam -- Science, Maths and Social Science will be held, on July 22, exam for languages will take place. The duration of the SSLC exam will be three hours. The exam will be held on the OMR sheets, where students will be asked simple and direct questions.