ಬ್ರೇಕಿಂಗ್ ನ್ಯೂಸ್
19-07-21 10:47 am Headline Karnataka Political Bureau ಕರ್ನಾಟಕ
ಬೆಂಗಳೂರು, ಜುಲೈ 19: ಕರ್ನಾಟಕ ಸಿಎಂ ಯಡಿಯೂರಪ್ಪ ಆರೋಗ್ಯ ಹದಗೆಡುತ್ತಿರುವ ಕಾರಣಕ್ಕೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ದೆಹಲಿ ಮಟ್ಟದಲ್ಲಿ ಹರಿದಾಡುತ್ತಿದೆ. ಎರಡು ದಿನಗಳ ಹಿಂದೆ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾಗ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜಿನಾಮೆ ಪ್ರಸ್ತಾಪ ಇಟ್ಟಿದ್ದಾರೆ ಎನ್ನಲಾಗುತ್ತಿದೆ.
ಯಡಿಯೂರಪ್ಪ ರಾಜಿನಾಮೆ ಪ್ರಸ್ತಾಪಕ್ಕೆ ಸಮ್ಮತಿ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು. ಅದರ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಸೂಚ್ಯವಾಗಿ ಹೇಳಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಅಮಿತ್ ಷಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನೂ ಭೇಟಿ ಮಾಡಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಗುಸುಗುಸು ಸುದ್ದಿ ಹರಿದಾಡುತ್ತಿದ್ದು ಇದನ್ನು ರಾಷ್ಟ್ರೀಯ ವಾಹಿನಿ ಇಂಡಿಯಾ ವರದಿ ಮಾಡಿದೆ.
ಆರೋಗ್ಯ ಕಾರಣದ ನೆಪವೊಡ್ಡಿ ಸಿಎಂ ಯಡಿಯೂರಪ್ಪ ಜುಲೈ 26ರಂದು ಶಾಸಕಾಂಗ ಸಭೆ ಕರೆದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗ್ಲೇ ಶಾಸಕಾಂಗ ಸಭೆ ಕರೆಯುವ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಯಡಿಯೂರಪ್ಪ, ಆ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ. ಶಾಸಕಾಂಗ ಸಭೆ ಕರೆಯುವ ಉದ್ದೇಶವನ್ನೂ ಹೇಳಿಕೊಂಡಿಲ್ಲ. ಮಾಹಿತಿ ಪ್ರಕಾರ, ಯಡಿಯೂರಪ್ಪ ರಾಜಿನಾಮೆ ಬಳಿಕ ಹೊಸ ಸಿಎಂ ಬರಲಿದ್ದಾರೆಂಬ ಮಾತು ಕೇಳಿಬರುತ್ತಿದೆ.
ಕಳೆದ ಒಂದು ವರ್ಷದಿಂದ ಯಡಿಯೂರಪ್ಪ ರಾಜಿನಾಮೆ ಬಗ್ಗೆ ವದಂತಿ ರೀತಿಯ ಸುದ್ದಿಗಳು ಆಗಿಂದಾಗ್ಗೆ ಹರಡುತ್ತಿದ್ದವು. ಆರು ತಿಂಗಳ ಹಿಂದೆ ಜನವರಿಯಲ್ಲಿ ದೆಹಲಿಗೆ ಹೋಗಿ ಬಂದಿದ್ದಾಗ ರಾಜಿನಾಮೆ ಪ್ರಸ್ತಾಪದ ಮಾತು ಹೊರಗೆಡವಿದ್ದರು. ಆನಂತರ ಸಿಎಂ ಯಡಿಯೂರಪ್ಪ ಬದಲಾವಣೆ ಸುದ್ದಿಗಳು ಸಾಕಷ್ಟು ಸುದ್ದಿ ಮಾಡಿದ್ದವು. ಈಗ ಅನಧಿಕೃತ ಮೂಲಗಳಿಂದ ಸಿಎಂ ಯಡಿಯೂರಪ್ಪ ಪದಚ್ಯುತಿ ಎನ್ನುವ ಸುದ್ದಿ ಜೋರಾಗಿಯೇ ಕೇಳಿಬರುತ್ತಿದೆ. ಆದರೆ ನಿನ್ನೆ ರಾತ್ರಿ ಲೀಕ್ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಡಿಯೋ ಎಲ್ಲ ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಲಿದ್ಯಾ ಅನ್ನುವ ಅನುಮಾನಕ್ಕೂ ಕಾರಣವಾಗಿದೆ.
Karnataka Chief Minister BS Yediyurappa on Saturday offered to resign on health grounds. According to reports, Prime Minister Narendra Modi has accepted the resignation of the Karnataka chief minister. Yediyurappa is very likely to resign on July 26, reports said. The Karnataka chief minister met BJP chief JP Nadda today and said he has been told to strengthen the party and bring it back to power in the state. The chief minister has said that he will also meet Union ministers Amit Shah and Rajnath Singh.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm