ಬ್ರೇಕಿಂಗ್ ನ್ಯೂಸ್
19-07-21 08:01 pm Bengaluru Correspondent ಕರ್ನಾಟಕ
ಬೆಂಗಳೂರು, ಜುಲೈ 19: ರಾಜ್ಯ ಬಿಜೆಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದು ಎನ್ನಲಾಗಿರುವ ಆಡಿಯೋ ಬಾಂಬ್ ಸಂಚಲನ ಎಬ್ಬಿಸಿರುವಂತೆಯೇ ಕರ್ನಾಟಕ ಕಾಂಗ್ರೆಸ್, ನಳಿನ್ ಕುಮಾರ್ ಕಟೀಲ್ ಅವರನ್ನು ಲೇವಡಿ ಮಾಡಿದ್ದು ಬಿಜೆಪಿ ಪಾಲಿಗೆ ನಳಿನ್ ಮೀರ್ ಸಾದಿಕ್ ಇದ್ದಂತೆ ಎಂದು ವ್ಯಂಗ್ಯ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್ ಈಶ್ವರಪ್ಪ ಅವರು ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ! ಕಾಮಿಡಿ ಪಾತ್ರ ಮಾಡುತ್ತಿದ್ದ ಕಟೀಲ್, ಈಗ ಬಿಜೆಪಿಯ ಹಲವರಿಗೆ ವಿಲ್ಲನ್ ಪಾತ್ರಧಾರಿಯಾಗಿದ್ದಾರೆ ಎಂದು ಟೀಕಿಸಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ! ಪಕ್ಷದ ರಾಜ್ಯಾಧ್ಯಕ್ಷರಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಏಕೆಂದರೆ ಸಂಚಿನ ಸೂತ್ರದಾರನೇ ನಳಿನ್ ಕುಮಾರ್ ಕಟೀಲ್ ಆಗಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ.
ಆಡಿಯೋ ಬಾಂಬ್ ; ಅದು ನನ್ನದಲ್ಲ , ನಾನವನಲ್ಲ ! ಕಿಡಿಗೇಡಿಗಳ ಸೃಷ್ಟಿ ; ನಳಿನ್ ಕುಮಾರ್ ಪ್ರತಿಕ್ರಿಯೆ
ಸಿಎಂ @BSYBJP ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆನ್ನುವುದು ಈಗ ತಿಳಿದಿದೆ!
— Karnataka Congress (@INCKarnataka) July 19, 2021
ಪಕ್ಷದ ರಾಜ್ಯಾಧ್ಯಕ್ಷರಾಗಿ
ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಸಚಿವ ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ.
ಏಕೆಂದರೆ ಸಂಚಿನ ಸೂತ್ರದಾರನೇ @nalinkateel!#BJPvsBJP
Audio tape of Karnataka BJP chief Nalin Kumar Kateel on leadership change goes viral. Congress Karnataka slams president on twitter. An alleged audiotape of Karnataka BJP chief Nalin Kumar Kateel goes viral where it can be heard that the BJP chief is speaking about a leadership change in the state. Kateel says in the clip, "Don't tell anyone, will be removing the entire team of Eshwarappa, Jagadish Shettar, and we will make a new team." However, the saffron party leader has denied it
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm