ಬ್ರೇಕಿಂಗ್ ನ್ಯೂಸ್
20-07-21 12:13 pm Bangalore Correspondent ಕರ್ನಾಟಕ
ನೆಲಮಂಗಲ, ಜುಲೈ 20: ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಮನೆಯ ಮೇಲೆ ಬೃಹತ್ ಕಾಂಪೌಂಡ್ ಗೋಡೆ ಕುಸಿದು ಅಣ್ಣ - ತಂಗಿ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿನ್ನಮಂಗಲ ಗ್ರಾಮದಲ್ಲಿ ಘಟನೆ ಮುಂಜಾನೆ ನಡೆದಿದೆ.
ಕಾಂಪೌಂಡ್ ಕುಸಿದು ಮನೆಯ ಮೇಲೆ ಬಿದ್ದಿದ್ದರಿಂದ ಅವಶೇಷಗಳಡಿ ಸಿಲುಕಿ ಅಣ್ಣ - ತಂಗಿ ಸಾವನ್ನಪ್ಪಿದ್ದಾರೆ. ಮೃತರು ತುಮಕೂರು ಜಿಲ್ಲೆ ಸಿ.ಎಸ್. ಪುರ ಮೂಲದ ವೇಣುಗೋಪಾಲ (22), ಕಾವ್ಯ(20) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿದ್ದ ಸಂಪತ್ ಅವರನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಂಗಿ ಕಾವ್ಯ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಆಕೆಯ ವಿದ್ಯಾಭ್ಯಾಸಕ್ಕಾಗಿ ವೇಣು ಗೋಪಾಲ್ ನೆಲಮಂಗಲದ ಬಿನ್ನಮಂಗಲದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ. ವೇಣುಗೋಪಾಲ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಕಾಂಪೌಂಡ್ ಪಕ್ಕದಲ್ಲಿ ಎಂಸ್ಯಾಂಡ್ ತುಂಬಿಸಲಾಗಿತ್ತು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ಶೀಟ್ ಮನೆ ಮೇಲೆ ಬಿದ್ದಿದೆ. ಅವಶೇಷಗಳ ಸಿಲುಕಿದ್ದ ಇಬ್ಬರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Huge compound collapses Brother and sister die on spot. A case has been registered at the Nelamangala Police station.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm