ಬ್ರೇಕಿಂಗ್ ನ್ಯೂಸ್
21-07-21 11:01 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 21: ರಾಜ್ಯದಲ್ಲಿ ಈ ವಾರದ ಕೊನೆಯವರೆಗೂ ಮಳೆ ದಿನಗಳು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಕಾರಣವಾಗಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಬಹುದು ಎಂದು ಹೇಳಿದೆ.
ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 20-24ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಜುಲೈ 7ರ ನಂತರ ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿತ್ತು.





ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಪ್ರಭಾವ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಗೋಚರಿಸಲಿದ್ದು, ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಜುಲೈ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಆನಂತರ ಮಳೆ ಕ್ಷೀಣಿಸಬಹುದು ಎಂದು ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದು, ಜುಲೈ 22ರವರೆಗೂ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. ಸುಳ್ಯ, ಉಪ್ಪಿನಂಗಡಿ, ಮೂಡುಬಿದಿರೆ, ಬೆಳ್ತಂಗಡಿ, ಕಾರವಾರ, ಪಣಂಬೂರು, ಕದ್ರ, ಹೊಳೆ ಹೊನ್ನೂರು, ಲಿಂಗನಮಕ್ಕಿ, ಶಿವಮೊಗ್ಗದಲ್ಲಿ ಮಳೆಯಾಗಿದೆ.
Rainy days are likely to continue in Karnataka till the end of this week after the India Meteorological Department said that coastal districts of the state could receive extensive rainfall owing to a low-pressure formation over the Bay of Bengal.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm