ಬ್ರೇಕಿಂಗ್ ನ್ಯೂಸ್
21-07-21 02:52 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜುಲೈ 21 : ಕೇಂದ್ರ ಸರ್ಕಾರ ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸದೆ ಆರ್ಥಿಕ ನೆರವು ನೀಡಿ ಸಾಕು. ಯಡಿಯೂರಪ್ಪ ಅವರನ್ನು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಸುವ ಕೆಲಸ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.
ಅವರು ಚಿತ್ರದುರ್ಗದಿಂದ ವಿಡಿಯೋ ಮೂಲಕ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಬದಲಾಯಿಸುವ ವಿಚಾರ ಪದೆ ಪದೇ ಹರಿದಾಡುತ್ತಿದೆ. ಯಾವುದೇ ಸರ್ಕಾರ ಪೂರ್ಣಾವಧಿಯ ಸಮಯವಿದ್ದಾಗ ಮಾತ್ರ ಒಳ್ಳೆಯ ಆಡಳಿತ ನೀಡಲು ಸಾಧ್ಯ. ಅದು ಬಿಟ್ಟು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂತಹ ಸಿಎಂ ಕೂಡ ಪರಿಪೂರ್ಣ ಆಡಳಿತ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಯಡಿಯೂರಪ್ಪ ಅವರ ಕೈ ಕಟ್ಟಿದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ನಾವು ಹೇಳೋದು ಎಲ್ಲರೂ ಒಳ್ಳೆ ಆಡಳಿತ ನೀಡಲು ಸಹಕರಿಸಿ ಎಂದರು.
ಯಾವುದೇ ಪಕ್ಷದ ಸಿಎಂ ಐದು ವರ್ಷಗಳ ಕಾಲ ಮುಂದುವರೆದರೆ ಮಾತ್ರ ಒಳ್ಳೆ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಸಿಎಂ ಗೆ ಪೂರ್ಣ ಸ್ವಾತಂತ್ರ್ಯ ನೀಡಿ. ಉತ್ತಮ ಆಡಳಿತ ಮಾಡಲು ಅವಕಾಶ ನೀಡಬೇಕು. ಒಂದು ವೇಳೆ ಅವರ ಆಡಳಿತದಲ್ಲಿ ದೋಷ ಕಂಡುಬಂದಾಗ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಪದೇ ಪದೇ ಸಿಎಂ ಬದಲಾವಣೆ ಮಾಡಿದರೆ ಅಧಿಕಾರಿಗಳು ಕೂಡ ಉತ್ತಮ ಕೆಲಸ ಮಾಡದೆ ಇರುವ ಸನ್ನಿವೇಶ ನಿರ್ಮಾಣ ಆಗುತ್ತದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹಾಲಿ ಸಿಎಂ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು. ಎರಡು ವರ್ಷಗಳ ಕಾಲ ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಇಂತಹ ಸಮಯದಲ್ಲಿ ಯಾವುದೋ ಒಂದು ಸಣ್ಣ ನೆಪ ಮಾಡಿಕೊಂಡು ಸಿಎಂ ಬದಲಾವಣೆ ಮಾಡುವ ಕೃತ್ಯ ಒಳ್ಳೆಯ ರಾಜಕಾರಣದ ಸಂಕೇತ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಕೇಂದ್ರ ಸರ್ಕಾರ ಮೂಗು ತೂರಿಸದೆ ಕಿರುಕುಳ ನೀಡದೆ ಆರ್ಥಿಕ ನೆರವು ನೀಡುವ ಮೂಲಕ ಉತ್ತಮ ಕೆಲಸ ಮಾಡಲು ಹಾಲಿ ಸಿಎಂ ಯಡಿಯೂರಪ್ಪ ಅವರನ್ನೆ ಮುಂದುವರೆಸಲು ಪ್ರಯತ್ನ ಮಾಡಬೇಕು ಎಂದಿದ್ದಾರೆ.
Amid speculation about a change of leadership in Karnataka, Chief Minister BS Yediyurappa received the support of senior Congress leaders from the Lingayat community and seers from various mutts in the state.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm