ಚಮಚಾಗಿರಿ ಮಾಡಿಲ್ಲವೆಂದು ಇಳಿಸುತ್ತಿದ್ದಾರೆ, ಯಡಿಯೂರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೇರಲು ಸಾಧ್ಯವಿಲ್ಲ ; ಸುಬ್ರಮಣ್ಯನ್ ಸ್ವಾಮಿ

22-07-21 12:01 pm       Headline Karnataka News Network   ಕರ್ನಾಟಕ

ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರು ಬಿ.ಎಸ್.ಯಡಿಯೂರಪ್ಪ. ಚಮಚಾಗಿರಿ ಮಾಡಿಲ್ಲವೆಂದು ಇದೀಗ ಅವರನ್ನು ಕೆಳಗಿಳಿಸುವ ಪಿತೂರಿಯನ್ನು ಕೆಲವರು ನಡೆಸಿದ್ದಾರೆ ಎಂದು ಸಚಿವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 

ನವದೆಹಲಿ, ಜುಲೈ 22: ನಾಯಕತ್ವ ಬದಲಾಯಿಸುವ ಕುರಿತು ಕರ್ನಾಟಕದಲ್ಲಿ ಭಾರೀ ಬೆಳವಣಿಗೆ ಆಗುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ಹೈಕಮಾಂಡ್ ನಡೆಗೆ ರಾಷ್ಟ್ರೀಯ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಅಪಸ್ವರ ಎತ್ತಿದ್ದಾರೆ. ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲು ಅಧಿಕಾರಕ್ಕೆ ತಂದವರು ಬಿ.ಎಸ್.ಯಡಿಯೂರಪ್ಪ. ಚಮಚಾಗಿರಿ ಮಾಡಿಲ್ಲವೆಂದು ಇದೀಗ ಅವರನ್ನು ಕೆಳಗಿಳಿಸುವ ಪಿತೂರಿಯನ್ನು ಕೆಲವರು ನಡೆಸಿದ್ದಾರೆ. ಆದರೆ ಯಡಿಯೂರಪ್ಪನವರು ಇಲ್ಲದೆ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ ಕಳೆದ ಬಾರಿ ಪಕ್ಷಕ್ಕೆ ಮರಳಿದ್ದಕ್ಕೆ ಬಿಜೆಪಿ ಮತ್ತೆ ಅಧಿಕಾರ ಹಿಡಿದಿತ್ತು. ಮರಳಿ ಅದೇ ರೀತಿಯ ತಪ್ಪನ್ನು ಯಾಕೆ ಮಾಡಲಾಗುತ್ತಿದೆ ಎಂದು ಅವರು ಟ್ವೀಟ್ ಮೂಲಕ ತಿವಿದಿದ್ದಾರೆ. 
 
ಈ ಮೂಲಕ ಕರ್ನಾಟಕದ ನಾಯಕತ್ವ ಬದಲಾವಣೆ ಕುರಿತು ಕೇಂದ್ರದ ನಾಯಕರು ತುಟಿ ಬಿಚ್ಚಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟ್ ಬೀಸಿದ್ದಾರೆ. ಅಲ್ಲದೆ ಈ ಮೂಲಕ ಬಿಜೆಪಿ ಹೈಕಮಾಂಡ್‍ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಬಿಎಸ್‍ವೈ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ. ಹಿಂದೆ ಮಾಡಿದ ತಪ್ಪನ್ನೇ ಹೈಕಮಾಂಡ್ ಮತ್ತೆ ಮಾಡಿದರೆ ಅದರಿಂದ ಕೇಡೇ ಆಗಲಿದೆ ಎಂದು ಹೇಳಿದ್ದಾರೆ.

Senior BJP leader Subramanian Swamy on Wednesday, July 21, 2021, cautioned the party leadership against removing B.S.Yediyurappa as the Karnataka Chief Minister as he brought the party to power in the State.