ಬ್ರೇಕಿಂಗ್ ನ್ಯೂಸ್
24-07-21 02:23 pm Headline Karnataka News Network ಕರ್ನಾಟಕ
ಮಂಗಳೂರು, ಜುಲೈ 24: ಕೋವಿಡ್ ಎರಡನೇ ಅಲೆಯ ಬಳಿಕ ಈಗಾಗ್ಲೇ ದೇವಸ್ಥಾನ, ಚರ್ಚ್ ಸೇರಿ ಧಾರ್ಮಿಕ ಕೇಂದ್ರಗಳಿಗೆ ತೆರಳಲು ಅನುಮತಿ ನೀಡಲಾಗಿತ್ತು. ಆದರೆ, ದೇವರ ದರ್ಶನಕ್ಕೆ ಮಾತ್ರ ಅವಕಾಶ, ಪ್ರಸಾದ ಇನ್ನಿತರ ಸೇವೆಗಳಿಗೆ ಅವಕಾಶ ಇರಲಿಲ್ಲ. ಇದೀಗ ಜುಲೈ 25ರಿಂದ ಎಲ್ಲ ರೀತಿಯ ಸೇವೆಗಳಿಗೂ ಅನುಮತಿ ನೀಡಿ ರಾಜ್ಯ ಸರಕಾರ ಆದೇಶ ಮಾಡಿದೆ.
ಈ ಬಗ್ಗೆ ಇಂದು ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ ಮಾಡಲಾಗಿದೆ. ಆದರೆ, ಮೆರವಣಿಗೆ, ಉತ್ಸವ ನಡೆಸಲು ಅವಕಾಶ ಇರುವುದಿಲ್ಲ ಎಂದು ಷರತ್ತು ವಿಧಿಸಲಾಗಿದೆ. ಕೋವಿಡ್ ನಿಯಮಗಳನ್ನು ಅನುಸರಿಸಿ ಸೇವೆ, ದರ್ಶನಕ್ಕೆ ಅನುಮತಿ ನೀಡಲಾಗಿದೆ. ಆಯಾ ದೇವಸ್ಥಾನ, ಚರ್ಚ್, ಮಸೀದಿ ಆಡಳಿತಗಳು ಭಕ್ತರ ದಟ್ಟಣೆ ಆಗದಂತೆ ಮತ್ತು ಕೋವಿಡ್ ನಿಯಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕಾಗಿದೆ.
ಇದೇ ವೇಳೆ, ಅಮ್ಯೂಸ್ ಮೆಂಟ್ ಪಾರ್ಕ್ ಇನ್ನಿತರ ಅದಕ್ಕೆ ಸಂಬಂಧಿತ ಚಟುವಟಿಕೆಗಳಿಗೂ ಅವಕಾಶ ನೀಡಲಾಗಿದೆ. ಆದರೆ ವಾಟರ್ ಸ್ಪೋರ್ಟ್ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿಲ್ಲ. ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಮತ್ತು ಮುಜರಾಯಿ ಖಾತೆಯನ್ನೂ ಹೊಂದಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಪ್ರಸಾದ ಇನ್ನಿತರ ಸೇವೆಗಳಿಗೆ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಜುಲೈ 25ರಿಂದ #ದೇವಳದ_ಸೇವೆಗಳು_ಪ್ರಾರಂಭ.ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @bsybjp ರನ್ನು ಭೇಟಿಯಾಗಿ ಮನವಿ ಮಾಡಿದ ಹಿನ್ನಲೆಯಲ್ಲಿ ಜುಲೈ 25ರಿಂದ ರಾಜ್ಯದಾದ್ಯಂತ ದೇವಾಲಯಗಳಲ್ಲಿ ಪೂಜಾದಿ ಸೇವೆ ಮತ್ತು ಪ್ರಸಾದ ವಿತರಣೆಗೆ ಅವಕಾಶ ಕಲ್ಪಿಸಲು ಆದೇಶಿಸಿದ್ದಾರೆ.ಅಧಿಕೃತ ಆದೇಶ ಪ್ರಕಟವಾಗಲಿದೆ.ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು. pic.twitter.com/ILFaszOqDk
— Kota Shrinivas Poojari (@KotasBJP) July 23, 2021
The state government, which had allowed devotees to visit temples, mosques, churches and other centres of worship and pay obeisance after the unlocking of rules relating to covid second wave, had continued to ban offering of services. distribution of Prasadam etc inside these centres. Now the state government has lifted the restriction.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm