ಬ್ರೇಕಿಂಗ್ ನ್ಯೂಸ್
25-07-21 02:35 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಮುಖ್ಯಮಂತ್ರಿ ಬದಲಾವಣೆಯ ತೂಗುಗತ್ತಿ ಹಾರಾಡುತ್ತಿರುವಾಗಲೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಲಿಂಗಾಯತ ಮತ್ತು ವೀರಶೈವ ಮಠಗಳ ಸ್ವಾಮೀಜಿಗಳು ಸಮಾವೇಶ ಸೇರಿದ್ದಾರೆ. ಸಭೆಯಲ್ಲಿ ರಾಜ್ಯದ ವಿವಿಧೆಡೆಯ ಮಠಗಳ 500ಕ್ಕೂ ಹೆಚ್ಚು ಸ್ವಾಮೀಜಿಗಳು ಸೇರಿದ್ದು, ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ನಡೆಸಿದ್ದಾರೆ.
ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ತಿಪಟೂರಿನ ರುದ್ರಮುನಿ ಸ್ವಾಮೀಜಿ ಮತ್ತು ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಂತೆ ಬಿಜೆಪಿ ಹೈಕಮಾಂಡಿಗೆ ಒತ್ತಡ ಹೇರುವ ನಿಟ್ಟಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಪ್ರಭಾವಿಯಾಗಿರುವ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳೇ ಸಭೆಯಲ್ಲಿ ಹೆಚ್ಚಿದ್ದಾರೆ. ಬಿಜೆಪಿ ಹೈಕಮಾಂಡ್, ಯಡಿಯೂರಪ್ಪ ಅವರನ್ನು ಕೈಬಿಟ್ಟರೆ ಬಿಜೆಪಿ ಪ್ರಬಲ ಮತಬ್ಯಾಂಕ್ ಕಳಕೊಳ್ಳಲಿದೆ ಎನ್ನುವ ಅಂಶವನ್ನು ಛೂಬಿಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.
ಸಮಾವೇಶದಲ್ಲಿ ಮಾತನಾಡಿದ ದಿಂಗಾಲೇಶ್ವರ ಶ್ರೀ, ಕೋವಿಡ್ ಸಂಕಷ್ಟದ ಸಮಯದಲ್ಲಿ ಯಡಿಯೂರಪ್ಪ ಅವರನ್ನು ಬದಲಿಸುವುದು ಸರಿಯಾದ ನಡೆಯಲ್ಲ. ಯಡಿಯೂರಪ್ಪ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ನಾವು ಸೇರಿದ್ದೇವೆ. ಇದು ಯಾರ ವಿರುದ್ಧವೂ ಅಲ್ಲ. ಉತ್ತಮವಾಗಿ ಕೆಲಸ ಮಾಡುತ್ತಿರುವ ಯಡಿಯೂರಪ್ಪ ಅವರನ್ನೇ ಮುಂದುವರಿಸಿ ಎನ್ನುವುದಷ್ಟೇ ನಮ್ಮ ಒತ್ತಾಯ ಎಂದರು.
500 Seers from state join at Palace Grounds in Support of BSY. THE BJP leadership is believed to be unhappy at the show of strength by the Lingayat community amidst indications that B S Yediyurappa is on his way out as the Karnataka Chief Minister.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 09:19 pm
Mangalore Correspondent
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm