ಬ್ರೇಕಿಂಗ್ ನ್ಯೂಸ್
25-07-21 09:29 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ನೀಡಿದ್ದ ಜುಲೈ 25ರ ಗಡುವು ಮುಗಿದಿದ್ದು ಮೇಲಿನಿಂದ ಬರುತ್ತೆ ಎಂದು ಕಾದಿದ್ದ ಆದೇಶ ಇನ್ನೂ ಬಂದಿಲ್ಲ. ಹೀಗಾಗಿ ಕೊನೆಯ ದಿನದ ಆಟ ನಾಳೆಗೆ ಶಿಫ್ಟ್ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗಾರರ ಪ್ರಶ್ನೆಗೆ ಸಂಜೆ ವೇಳೆಗೆ ಮತ್ತೊಂದು ದಾಳ ಎಸೆಯುವ ರೀತಿ ಉತ್ತರ ಕೊಟ್ಟಿದ್ದಾರೆ.
ಇಂದು ರಾತ್ರಿ ವರೆಗೂ ಹೈಕಮಾಂಡ್ ಆದೇಶಕ್ಕೆ ಕಾಯುತ್ತೇನೆ. ಏನು ಸುದ್ದಿ ಬರುತ್ತೆ ಅಂತ ಬೆಳಗ್ಗೆ ಹೇಳುತ್ತೇನೆ. ಅಲ್ಲಿ ವರೆಗೂ ಕಾಯಿರಿ. ಹೈಕಮಾಂಡ್ ಹೇಳಿದರೆ ರಾಜಿನಾಮೆ ನೀಡುತ್ತೇನೆ. ಪಕ್ಷದ ಕೆಲಸ ಮಾಡಲು ಹೇಳಿದರೆ ಅದನ್ನೂ ಮಾಡುತ್ತೇನೆ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ಏಕೆ ಮಾಡುತ್ತಾರೆಂದು ನನಗೆ ತಿಳಿದಿಲ್ಲ. ಕೊನೆ ಕ್ಷಣದ ವರೆಗೂ ಕೆಲಸ ಮಾಡುತ್ತೇನೆ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಹೇಳಿಕೆ ನೀಡಿದ್ದಾರೆ.
ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ಸಂಜೆಯೊಳಗೆ ಹೈಕಮಾಂಡ್ ಆದೇಶ ಬರಲಿದೆ, ಕಾದು ನೋಡಿ ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದರು. ಆದರೆ ಗಡುವು ಕಳೆದರೂ ಹೈಕಮಾಂಡ್ ಕಡೆಯಿಂದ ಯಾವುದೇ ಕಮಾಂಡ್ ಬರದೇ ಇರುವುದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
ನಾಳೆ ಜುಲೈ 26 ಕ್ಕೆ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರೈಸಲಿದ್ದು ಅದರ ಪ್ರಯುಕ್ತ ಬೆಂಗಳೂರಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡು ವರ್ಷದ ಸಾಧನೆಯ ಬಗ್ಗೆ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ. ಆದರೆ ಅದಕ್ಕೂ ಮುನ್ನ ಹೈಕಮಾಂಡ್ ಕಡೆಯಿಂದ ಸಿಎಂ ಸ್ಥಾನದಿಂದ ಇಳಿಯಲು ಸೂಚನೆ ಕೊಟ್ಟರೆ ಯಡಿಯೂರಪ್ಪ ವಿದಾಯ ಭಾಷಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಇದೇ ಸಂದರ್ಭದಲ್ಲಿ ಗೋವಾಕ್ಕೆ ಬಂದಿದ್ದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯಡಿಯೂರಪ್ಪ ಸರಕಾರದ ಬಗ್ಗೆ ಬಹುಪರಾಕ್ ಹೇಳಿದ್ದಾರೆ. ಯಡಿಯೂರಪ್ಪ ಕರ್ನಾಟಕದಲ್ಲಿ ಒಳ್ಳೆ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿದ್ದು ಸಿಎಂ ಯಡಿಯೂರಪ್ಪ ಬೀಸೋ ದೊಣ್ಣೆಯಿಂದ ಸದ್ಯಕ್ಕೆ ಪಾರಾದ್ರಾ ಎನ್ನುವ ಕುತೂಹಲದ ಪ್ರಶ್ನೆ ಎದುರಾಗಿದೆ.
ಒಂದೆಡೆ 500ಕ್ಕೂ ಹೆಚ್ಚು ಲಿಂಗಾಯತ ಸ್ವಾಮೀಜಿಗಳ ಶಕ್ತಿಪ್ರದರ್ಶನ, ಇನ್ನೊಂದೆಡೆ ಪ್ರವಾಹ ಪೀಡಿತ ಪ್ರದೇಶದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಹೈಕಮಾಂಡ್ ರಾಜಕೀಯ ಲೆಕ್ಕಾಚಾರವನ್ನು ಬುಡಮೇಲು ಮಾಡುತ್ತಾ ಎನ್ನುವ ಹೊಸ ಲೆಕ್ಕ ಶುರುವಾಗಿದೆ.
With no official word yet from the BJP high command on leadership change in the state, chief minister B S Yediyurappa on Sunday July 25 evening said that a decision on whether he will continue in office or not will be known by Monday July 26. The speculation about change of guard had gained momentum in the state after the 78-year-old Lingayat strongman and BJP's aging mascot in Karnataka had stated that he would abide by the party high command's decision whether to remain CM or step down.
25-11-24 05:51 pm
Bangalore Correspondent
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 11:14 pm
Mangalore Correspondent
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
25-11-24 06:17 pm
HK News Desk
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm