ಬ್ರೇಕಿಂಗ್ ನ್ಯೂಸ್
27-07-21 12:03 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ನಡುವೆ ಮುಂದಿನ ಮುಖ್ಯಮಂತ್ರಿ ಯಾರನ್ನ ಮಾಡಬೇಕೆಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ಇದ್ದು, ಇದಕ್ಕಾಗಿ ಧರ್ಮೇಂದ್ರ ಪ್ರಧಾನ್ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಕರ್ನಾಟಕ ವೀಕ್ಷಕರಾಗಿ ನೇಮಕ ಮಾಡಲಾಗಿದೆ. ಆದರೆ, ವೀಕ್ಷಕರ ತಂಡ ರಾಜ್ಯಕ್ಕೆ ಆಗಮಿಸುವ ಮೊದಲೇ ಬಿಎಲ್ ಸಂತೋಷ್ ಅವರು ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಈ ನಡುವೆ, ಬಿ.ಎಲ್.ಸಂತೋಷ್ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡುವ ಬಗ್ಗೆ ಹೈಕಮಾಂಡ್ ಹೆಚ್ಚಿನ ಒಲವು ತೋರಿದೆ ಎನ್ನಲಾಗುತ್ತಿದ್ದು, ಈ ಕುರಿತು ಇನ್ನೆರಡು ದಿನದಲ್ಲಿ ಅಧಿಕೃತ ಮಾಹಿತಿಗಳು ಹೊರಬೀಳಲಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.
ಸಿಎಂ ಸ್ಥಾನಕ್ಕೆ ಬಿ.ಎಲ್.ಸಂತೋಷ್ ಹೆಸರು ಈಗಾಗಲೇ ಅಂತಿಮಗೊಂಡಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬೆಂಗಳೂರಿಗೆ ಭೇಟಿ ನೀಡಿ ಘೋಷಣೆಗಳನ್ನು ಮಾಡಲಿದ್ದಾರೆ ಎನ್ನಲಾಗಿದೆ.
ಬಿಎಲ್.ಸಂತೋಷ್ ಎಂಜಿನಿಯರಿಂಗ್ ಪದವೀಧರರಾಗಿದ್ದು, ಆರೆಸ್ಸೆಸ್ ಪೂರ್ಣಾವಧಿ ಪ್ರಚಾರಕ್ ಆಗಿದ್ದವರು. ರಾಜ್ಯ ಬಿಜೆಪಿ ಜೊತೆಗೆ ಅವರ ಒಡನಾಟ 1993ರಿಂದಲೂ ಇದೆ. ಕರ್ನಾಟಕದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಮಹತ್ವದ ಹುದ್ದೆಗಳನ್ನು ಪಡೆಯುತ್ತಾ ಸಾಗಿದ ಬಿ.ಎಲ್.ಸಂತೋಷ್ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಲ್ಲಿ ಒಬ್ಬರಾಗಿದ್ದಾರೆ. ಅತ್ಯಂತ ಮಿತವ್ಯಯದ ಜೀವನಶೈಲಿ ನಡೆಸುತ್ತಿರುವ ಸಂತೋಷ್ ಅವರನ್ನು ಪಕ್ಷದ ವಲಯದಲ್ಲಿ ಸಂತೋಷ್ ಜೀ ಎಂದು ಪ್ರೀತಿಯಿಂದ ಕರೆಯಲಾಗುತ್ತದೆ.
ಬಿ.ಎಲ್.ಸಂತೋಷ್ ಅವರನ್ನು ಸಿಎಂ ಮಾಡಿದ ಬಳಿಕ ಪಕ್ಷದಲ್ಲಿ ಬಂಡಾಯ ಶುರುವಾದರೆ ಅದನ್ನು ನಿವಾರಿಸಲು ಜೆಡಿಎಸ್ ಬೆಂಬಲ ಪಡೆಯುವ ಬಗ್ಗೆ ಮಾತುಕತೆ ನಡೆದಿದೆ. ಅದಕ್ಕಾಗಿ ಸಂತೋಷ್ ಹಾಗೂ ಬಿಜೆಪಿಯ ಇತರೆ ಹಿರಿಯ ನಾಯಕರು ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಅವರೊಂದಿಗೆ ಸಂಪರ್ಕದಲ್ಲಿದ್ದಾರೆಂದು ಹೇಳಲಾಗುತ್ತಿದೆ. ಇದಕ್ಕೆ ಇಂಬು ನೀಡುವಂತೆ ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪುರ್ ಅವರು, ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿದ್ದಾರೆಂದು ಹೇಳಲಾಗುತ್ತಿದ್ದು, ಸೋಮವಾರ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆಂದು ತಿಳಿದುಬಂದಿದೆ.
ಈ ಬೆಳವಣಿಗೆ ಬಗ್ಗೆ ಮಾಹಿತಿ ತಿಳಿದಿದಿದ್ದ ಯಡಿಯೂರಪ್ಪ ಅವರು, ನಿನ್ನೆ ಭಾಷಣ ಮಾಡುವ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧ ಕಿಡಿಕಾರಿದ್ದರು. ಬದಲಾದ ರಾಜಕೀಯದಲ್ಲಿ ಜೆಡಿಎಸ್ ಜೊತೆ ಸೇರಿ ಸರಕಾರವನ್ನು ರಚಿಸಿದೆವು. ಕುಮಾರಸ್ವಾಮಿ ಮುಖ್ಯಮಂತ್ರಿ, ನಾನು ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದೆವು. 20 ತಿಂಗಳ ಅವಧಿಗೆ ಅಧಿಕಾರ ಹಂಚಿಕೆ ಒಪ್ಪಂದವಾಗಿತ್ತು. ಮೊದಲ ಅವಧಿ ಪೂರೈಸಿದ ಎಚ್.ಡಿ. ಕುಮಾರಸ್ವಾಮಿ ಅಧಿಕಾರ ಹಸ್ತಾಂತರ ಮಾಡಲು ಹಿಂದೇಟು ಹಾಕಿದರು. ಆದರೆ ಅಪ್ಪ ಮಗ ಸೇರಿ ಬೆನ್ನಿಗೆ ಚೂರಿ ಹಾಕಿದರು ಎನ್ನುವ ಮೂಲಕ ಹಳೆಯದನ್ನು ಕೆದಕಿ ಕಿಡಿಕಾರಿದ್ದರು. ಇದು ಸಂತೋಷ್ ಬಣ ಜೆಡಿಎಸ್ ಜೊತೆಗೆ ಮೈತ್ರಿಗೆ ಮುಂದಾಗಿರುವ ಸಂಕೇತ ತಿಳಿದೇ ತಿವಿದಿದ್ದಾರೆ ಎನ್ನಲಾಗುತ್ತಿದೆ.
With the countdown for the change of guard nearing, the BJP top brass is contemplating recommending the incumbent National General Secretary (Organisation) of the party, B.L. Santhosh as the successor of Karnataka Chief Minister B.S. Yediyurappa.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm