ಬ್ರೇಕಿಂಗ್ ನ್ಯೂಸ್
27-07-21 10:50 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ. ಹಾವೇರಿ ಜಿಲ್ಲೆಯ ಬಸವರಾಜ್ ಬೊಮ್ಮಾಯಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕುರಿತು ಕಿರು ಪರಿಚಯ ಇಲ್ಲಿದೆ.
ಬಸವರಾಜ್ ಸೋಮಪ್ಪ ಬೊಮ್ಮಾಯಿ ಒಬ್ಬ ಸರಳ ಸಜ್ಜನ ರಾಜಕಾರಣಿ. ಜನತಾ ದಳದೊಂದಿಗೆ ರಾಜಕೀಯ ಜೀವನ ಪ್ರಾರಂಭಿಸಿದ ಅವರು 2008ರಲ್ಲಿ ಬಿ.ಎಸ್. ಯಡಿಯೂರಪ್ಪ ಗರಡಿಯಲ್ಲಿ ಬಿಜೆಪಿ ಸೇರಿದ್ದರು.
ಕಳೆದ ಯಡಿಯೂರಪ್ಪ ಸರಕಾರದಲ್ಲಿ ಗೃಹ ವ್ಯವಹಾರ, ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸಕಾಂಗ ಸಚಿವರಾಗಿದ್ದ ಬೊಮ್ಮಾಯಿ, ಈ ಹಿಂದೆ 2008ರ ಸರಕಾರದಲ್ಲಿ ಜಲಸಂಪನ್ಮೂಲ ಮತ್ತು ಸಹಕಾರ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಜನತಾ ಪರಿವಾರದಿಂದ ಬಿಜೆಪಿ ಹಾದಿಗೆ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಆರ್. ಬೊಮ್ಮಾಯಿ ಪುತ್ರನಾಗಿರುವ ಬಸವರಾಜ್ ಬೊಮ್ಮಾಯಿ, 1960ರ ಜನವರಿ 18ರಂದು ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಜನನ. ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಪತ್ನಿ ಹೆಸರು ಚೆನ್ನಮ್ಮ ಹಾಗೂ ಇಬ್ಬರು ಮಕ್ಕಳಿದ್ದಾರೆ. ಅಪ್ಪನ ಹಾದಿಯಲ್ಲಿ ಜನತಾದಳದೊಂದಿಗೆ ತಮ್ಮ ರಾಜಕೀಯ ಪ್ರಯಾಣ ಆರಂಭಿಸಿದ ಬಸವರಾಜ್ ಬೊಮ್ಮಾಯಿ ಆರಂಭದಲ್ಲಿ ವಿಧಾನ ಪರಿಷತ್ತಿಗೆ ಎರಡು ಬಾರಿ ಆಯ್ಕೆಯಾಗಿದ್ದರು. 1997 ಮತ್ತು 2003 ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಧಾರವಾಡ, ಹಾವೇರಿ, ಗದಗ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿದ್ದರು. 96- 97ರಲ್ಲಿ ಆಗಿನ ಸಿಎಂ ಜೆ.ಎಚ್. ಪಟೇಲ್ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.
2008ರಲ್ಲಿ ಜನತಾದಳ ಬಿಟ್ಟು ಯಡಿಯೂರಪ್ಪ ಗರಡಿ ಸೇರಿದ್ದರು. 2008ರಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಲ್ಲಿ ವಿಧಾನಸಭೆಗೆ ಬಿಜೆಪಿ ಟಿಕೆಟ್ ಪಡೆದು ಗೆಲುವು ಸಾಧಿಸಿದ ಅವರನ್ನು ಜಲಸಂಪನ್ಮೂಲ ಸಚಿವರಾಗಿ ಮಾಡಲಾಗಿತ್ತು.
ಆಬಳಿಕ ಶಿಗ್ಗಾಂವಿ ಕ್ಷೇತ್ರದಲ್ಲಿ ಸತತ ಮೂರನೇ ಅವಧಿಗೆ ಶಾಸಕರಾಗಿದ್ದ ಬೊಮ್ಮಾಯಿ, 2019ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅವರನ್ನು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು.
Who is Basavaraj Bommai ? Born on January 28, 1960, Basavaraj Bommai is the son of former Chief Minister of Karnataka, S. R. Bommai. He belongs to the Sadara Lingayat community. An engineer, and an agriculturist and industrialist by profession, Bommai started his career with the Tata group. The newly elected chief minister is widely known for his contributions to innumerable irrigation schemes and deep knowledge regarding Irrigation matters in Karnataka.
26-11-24 11:52 am
HK News Desk
ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ, ದೇವೇಗೌಡರಿಗೆ ಜನ ಗೌರ...
25-11-24 05:51 pm
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 11:14 pm
Mangalore Correspondent
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
25-11-24 06:17 pm
HK News Desk
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm