ಬ್ರೇಕಿಂಗ್ ನ್ಯೂಸ್
02-08-21 02:26 pm Headline Karnataka News Network ಕರ್ನಾಟಕ
ಚಾಮರಾಜನಗರ, ಆಗಸ್ಟ್ 2: ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನಕ್ಕೆ ಪರೋಕ್ಷ ಸಹಕರಿಸಿದ್ದ ಬಿ.ಎಸ್.ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ಕೊನೆಗೂ ಬಿಜೆಪಿ ಸೇರುವುದು ಖಚಿತವಾಗಿದ್ದು ಆಗಸ್ಟ್ 5ರಂದು ಅಧಿಕೃತವಾಗಿ ಬೆಂಗಳೂರಿನಲ್ಲಿ ಬಿಜೆಪಿ ಸೇರಲಿದ್ದೇನೆ ಎಂದು ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಿಂದ ಪ್ರಥಮ ಭಾರಿಗೆ ಬಿ.ಎಸ್.ಪಿ ಪಕ್ಷದಿಂದ ಶಾಸಕರಾದ ಎನ್. ಮಹೇಶ್, ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಬೆಂಬಲ ಸೂಚಿಸಿ ಸಚಿವರಾಗಿದ್ದರು. ಬಳಿಕ ಕೆಲವರ ಜೊತೆ ಮುನಿಸು ಉಂಟಾಗಿ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದರು. ಪಕ್ಷದ ಅಧ್ಯಕ್ಷೆ ಮಾಯಾವತಿ ಸೂಚನೆಯಂತೆ, ರಾಜಿನಾಮೆ ನೀಡಿದ್ದು ಎನ್ನಲಾಗಿತ್ತು.
ಬಳಿಕ 17 ಶಾಸಕರ ರಾಜಿನಾಮೆಯಿಂದ ಮೈತ್ರಿ ಸರಕಾರ ಪತನಗೊಳ್ಳುವ ಸಂದರ್ಭ ಎದುರಾದಾಗ, ಬಹುಮತ ಸಾಬೀತು ವೇಳೆಯಲ್ಲಿ ಬಿಎಸ್ಪಿ ಪಕ್ಷದ ಅಧಿನಾಯಕಿ ಮಾಯಾವತಿ ನಿರ್ದೇಶನವನ್ನು ಧಿಕ್ಕರಿಸಿದ್ದರಿಂದ ಎನ್. ಮಹೇಶ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.

ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಸಚಿವರಾಗುವ ಕನಸು ಹೊತ್ತಿದ್ದ ಎನ್. ಮಹೇಶ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿರಲಿಲ್ಲ. ಮೊನ್ನೆ ಜುಲೈ 30 ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎನ್. ಮಹೇಶ್ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಆಹ್ವಾನಿಸಿದ್ದು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕ ಎನ್. ಮಹೇಶ್, ರಾಜಕೀಯ ವಿರೋಧಿಯಾಗಿದ್ದ ಕೊಳ್ಳೇಗಾಲದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅವರ ನಿವಾಸಕ್ಕೆ ಆಗಮಿಸಿದ್ದು ಪರಸ್ಪರ ಕುಶಲೋಪರಿ ಮಾತನಾಡಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ಎನ್. ಮಹೇಶ್, ಆಗಸ್ಟ್ 5 ರಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಮಲ ಹಿಡಿಯಲಿದ್ದೇನೆ ಎಂದು ಸ್ಪಷ್ಟ ಪಡಿಸಿದರು.
ಮುಂದಿನ ದಿನಗಳಲ್ಲಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಜಿಲ್ಲೆ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವಂತೆ ಮಾಡುವುದಾಗಿ ಶಾಸಕ ಎನ್. ಮಹೇಶ್ ಹೇಳಿದ್ದಾರೆ.
Kollegal MLA N Mahesh, expelled from the Bahujan Samaj Party (BSP), said on Friday that he would soon join the BJP. For the sake of my future in politics, I've decided to join the BJP. The president of the Karnataka unit of the party and other leaders will discuss and give the date, and I will join then,'' Mahesh, who was ousted from the BSP in 2019, told PTI.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm