ದಕ್ಷಿಣ ಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನಾಳೆಯಿಂದಲೇ ವೀಕೆಂಡ್ ಲಾಕ್ಡೌನ್ ; ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ

06-08-21 03:20 pm       Headline Karnataka News Network   ಕರ್ನಾಟಕ

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದ ಗಡಿ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಪ್ಯೂ ಜಾರಿಗೊಳಿಸಲಾಗುವುದು.

ಬೆಂಗಳೂರು, ಆಗಸ್ಟ್ 6 : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದ ಗಡಿ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಪ್ಯೂ ಜಾರಿಗೊಳಿಸಲಾಗುವುದು. ಅಲ್ಲದೇ ರಾಜ್ಯದಾದ್ಯಂತ ರಾತ್ರಿ 9ರಿಂದ ನೈಟ್‌ ಕರ್ಪ್ಯೂ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ತಜ್ಞರು, ಕೋವಿಡ್‌ ತಾಂತ್ರಿಕ ಸಮಿತಿಯ ನೇತೃತ್ವದಲ್ಲಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ವೀಕೆಂಡ್‌ ಕರ್ಪ್ಯೂ ಹೇರಿಕೆ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ನೈಟ್‌ ಕರ್ಪ್ಯೂವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೊಲೀಸ್‌ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.

ತಜ್ಞರಾದ ಡಾ.ದೇವಿ ಶೆಟ್ಟಿ, ಡಾ.ಮಂಜುನಾಥ್.‌ ಡಾ. ರವಿ ಅವರ ನೇತೃತ್ವದಲ್ಲಿ ಸಭೆಯನ್ನು ನಡೆಸಿ ಚರ್ಚೆಯನ್ನು ಮಾಡಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಪಾಸಿಟಿವಿಟಿ ರೇಟ್‌ ನೋಡಿಕೊಂಡು ಮುಂದಿನ ದಿನಗಳಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗವುದು ಎಂದಿದ್ದಾರೆ. 

ಇದರಂತೆ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ಡೌನ್ ಇರಲಿದೆ.‌

Night Curfew in Karnataka Weekend Curfew in Border Districts amid Covid 19 Surge Basavaraj Bommai.