ಬ್ರೇಕಿಂಗ್ ನ್ಯೂಸ್
07-08-21 01:33 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಸಿಎಂ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಕಡೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದರೆ, ಆರಗ ಜ್ಞಾನೇಂದ್ರ ಅವರಿಗೆ ಗೃಹ ಇಲಾಖೆ ನೀಡಲಾಗಿದೆ. ಸುರೇಶ್ ಕುಮಾರ್ ಕೈಯಲ್ಲಿದ್ದ ಶಿಕ್ಷಣ ಖಾತೆಯನ್ನು ಬಿ.ಸಿ.ನಾಗೇಶ್ ಗೆ ಕೊಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಅವರಿಗೆ ವಹಿಸಲಾಗಿದೆ.




ಮುರುಗೇಶ್ ನಿರಾಣಿಗೆ ಬೃಹತ್ ಕೈಗಾರಿಕೆ ಖಾತೆ ನೀಡಿದ್ದರೆ, ಸಿಸಿ ಪಾಟೀಲ ಅವರಿಗೆ ಲೋಕೋಪಯೋಗಿ ಇಲಾಖೆ ನೀಡಲಾಗಿದೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಬಂಪರ್ ಪಡೆದಿದ್ದು, ಇಂಧನ ಖಾತೆಯ ಜೊತೆಗೆ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ವಹಿಸಲಾಗಿದೆ. ಕಳೆದ ಬಾರಿ ಲೋಕೋಪಯೋಗಿ ಇಲಾಖೆ ಹೊಂದಿದ್ದ ಗೋವಿಂದ ಕಾರಜೋಳಗೆ ಜಲಸಂಪನ್ಮೂಲ ಖಾತೆ ವಹಿಸಲಾಗಿದೆ. ಕೆ.ಎಸ್. ಈಶ್ವರಪ್ಪ ಅವರನ್ನು ಈ ಹಿಂದೆ ಇದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯಲ್ಲೇ ಉಳಿಸಲಾಗಿದೆ.


ಬಿ.ಶ್ರೀರಾಮುಲು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ವಿ.ಸೋಮಣ್ಣ ವಸತಿ ಮತ್ತು ಮೂಲಸೌಕರ್ಯ, ಆರ್.ಅಶೋಕ್ - ಕಂದಾಯ, ಉಮೇಶ್ ಕತ್ತಿ – ಆಹಾರ ಮತ್ತು ನಾಗರಿಕ ಪೂರೈಕೆ, ಎಸ್- ಅಂಗಾರ – ಮೀನುಗಾರಿಕೆ ಮತ್ತು ಬಂದರು, ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ, ಡಾ.ಸಿ.ಎನ್. ಅಶ್ವತ್ಥ ನಾರಾಯಣ – ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಆನಂದ ಸಿಂಗ್ – ಪರಿಸರ, ಪ್ರವಾಸೋದ್ಯಮ, ಕೋಟ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಶಿವರಾಮ ಹೆಬ್ಬಾರ್ – ಕಾರ್ಮಿಕ


ಎಸ್.ಟಿ.ಸೋಮಶೇಖರ್ – ಸಹಕಾರ, ಬಿ.ಸಿ.ಪಾಟೀಲ್- ಕೃಷಿ, ಬೈರತಿ ಬಸವರಾಜು – ನಗರಾಭಿವೃದ್ಧಿ, ಡಾ.ಕೆ.ಸುಧಾಕರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಕೆ.ಗೋಪಾಲಯ್ಯ – ಅಬಕಾರಿ, ಶಶಿಕಲಾ ಜೊಲ್ಲೆ – ಮುಜರಾಯಿ, ವಕ್ಫ್, ಎಂಟಿಬಿ ನಾಗರಾಜು – ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ, ಕೆ.ಸಿ.ನಾರಾಯಣ ಗೌಡ – ರೇಷ್ಮೆ ಯುವ ಸಬಲೀಕರಣ, ಕ್ರೀಡೆ, ಬಿ.ಸಿ. ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸುನಿಲ್ ಕುಮಾರ್ – ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ, ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ, ಶಂಕರ ಪಾಟೀಲ್ ಮುನೇನಕೊಪ್ಪ- ಕೈಮಗ್ಗ, ಜವಳಿ, ಸಕ್ಕರೆ ಖಾತೆ, ಮುನಿರತ್ನ – ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ ಖಾತೆಯನ್ನು ನೀಡಲಾಗಿದೆ.
Karnataka Chief Minister Basavaraj Bommai on Friday allocated portfolios to 29 ministers inducted into his new cabinet. While the CM kept the key portfolios of finance, Bengaluru development and cabinet affairs, core BJP MLAs secured prime berths in Bommai’s cabinet.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm