ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm