ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್‌ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್‌ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.

ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 07:50 pm
HK News Staffer
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm