ಕೃಷ್ಣೈಕ್ಯರಾದ ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ!!

06-09-20 10:55 am       Dhruthi Anchan - Correspondent   ಕರ್ನಾಟಕ

ಎಡನೀರು ಜಗದ್ಗುರು ಶಂಕರಾಚಾರ್ಯ ಸಂಸ್ಥಾನದ ಮಠಾಧೀಶ ಕೇಶವಾನಂದ ಭಾರತೀ ಸ್ವಾಮೀಜಿ ಶನಿವಾರ ರಾತ್ರಿ 12.45ರ ಸುಮಾರಿಗೆ ಇಹಲೋಕ ತ್ಯಜಿಸಿದರು

ಕಾಸರಗೋಡು, ಸೆಪ್ಟೆಂಬರ್.6 : ಕೇರಳದ ಕಾಸಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ (79) ಶನಿವಾರ ಮಧ್ಯರಾತ್ರಿ ಕೃಷ್ಣೈಕ್ಯರಾಗಿದ್ದಾರೆ.

ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.

ಅಷ್ಟೇ ಅಲ್ಲದೆ ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೇಶವಾನಂದ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿದೆ. ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ ಪ್ರಕರಣ ಭಾರಿ ಪ್ರಸಿದ್ಧಿ ಪಡೆದಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅತೀ ಅಪರೂಪ ಎಂಬಂತೆ 13 ಮಂದಿ ನ್ಯಾಯಾಧೀಶರ ಪೀಠ ರಚಿಸಿ ಕೈಗೊಂಡಿದ್ದು ದೇಶದಲ್ಲಿ ಸಂಚಲನ ಉಂಟು ಮಾಡಿತ್ತು.