ಸೆಪ್ಟೆಂಬರ್ 10ರವರೆಗೆ ಕರಾವಳಿಯಲ್ಲಿ ವ್ಯಾಪಕ ಮಳೆ !!

06-09-20 05:53 pm       Dhruthi Anchan - Correspondent   ಕರ್ನಾಟಕ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 6ರಿಂದ 10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಸೆಪ್ಟೆಂಬರ್.6 : ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ದಕ್ಷಿಣ ಒಳನಾಡು ಭಾಗದಲ್ಲೂ ಸೆಪ್ಟೆಂಬರ್ 6ರಿಂದ 10ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಚಾಮರಾಜನಗರ, ಮೈಸೂರು, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6,7,8ರಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನು ಉತ್ತರ ಒಳನಾಡು ಭಾಗದಲ್ಲಿ ಸೆಪ್ಟೆಂಬರ್​ 6 ಮತ್ತು 7ರಂದು ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್  8ರವರೆಗೂ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.