ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm