ಬ್ರೇಕಿಂಗ್ ನ್ಯೂಸ್
09-09-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಸೆ.9 : ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಗ ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯಲ್ಲಿ ಎಡವಟ್ಟು ಮಾಡಿಕೊಂಡು ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕು ಕಂಡುಬರುತ್ತಿದ್ದು ನಿಯಂತ್ರಣ ಮಾಡಲಾಗದೆ ಇಕ್ಕಟ್ಟಿಗೆ ಬಿದ್ದಿದೆ.
ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಪ್ರಕರಣ ದಾಖಲಾಗುತ್ತಿದ್ದು, ಪಾಸಿಟಿವ್ ದರ ಶೇ.15ಕ್ಕಿಂತ ಹೆಚ್ಚಿದ್ದರೂ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನುತೆರೆಯಲು ನಿರ್ಧರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಬುಧವಾರ ಕೂಡ ಕೇರಳದಲ್ಲಿ 30,196 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 181 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಅಕ್ಟೋಬರ್ 4 ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 4 ರಿಂದ ಕಾಲೇಜುಗಳನ್ನು ಹಾಗೂ ವಿವಿಗಳನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.
ಕೇರಳದಲ್ಲಿ ಬಕ್ರೀದ್ ಹಾಗೂ ಓಣಂ ಹಬ್ಬಕ್ಕೆ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಕರ್ಫ್ಯೂ ಆದೇಶವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.
Kerala Government Decides to Reopen Colleges and Universities Despite Covid Spike.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm