ಬ್ರೇಕಿಂಗ್ ನ್ಯೂಸ್
10-09-21 10:35 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.10 : ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕಾಗಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನು ಬೇಕಾದರೂ ಮಾಡುತ್ತದೆ. ಆದರೆ ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‍ಎಸ್‍ಎಸ್ ಸ್ಥಾಪಿಸಿದ್ದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ.
ಈ ಮುನ್ನ ಸೆ.6ರಂದು ಟ್ವೀಟ್ ಮಾಡಿದ್ದ ಚೇತನ್, ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನ್ನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು.
Actor Chetan makes controversial statement about congress and BJP.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am