ಬ್ರೇಕಿಂಗ್ ನ್ಯೂಸ್
14-09-21 04:36 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.14: ಬಾಯಲ್ಲಿ ಹಿಂದೂ ಹಿಂದೂ ಅಂತಾರೆ, ಈಗ ಹಿಂದುಗಳ ದೇವಸ್ಥಾನಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಂದನ್ನು ಕೆಡವಿದ ಅಲ್ಲಿನ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿರುವಾಗಲೇ ವಿರೋಧ ಪಕ್ಷಗಳ ಮುಖಂಡರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಜೆಡಿಎಸ್ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್.ಡಿ.ರೇವಣ್ಣ, ಕೆಲವರು ಜೆಡಿಎಸ್ ಮುಳುಗುವ ದೋಣಿ ಎನ್ನುತ್ತಿದ್ದರು. ಮುಳುಗುವಾಗ ಹೇಗೆ ಮೇಲೆತ್ತುವುದು ಎನ್ನುವುದೂ ಗೊತ್ತಿದೆ. ಸಮುದ್ರದಲ್ಲಿ ಮುಳುಗೇಳುವ ಸಬ್‌ಮೆರಿನ್ ಮೆಷಿನ್ ನಮ್ಮ ಬಳಿ ಇದೆ. ಯಾವಾಗ ಹಡಗು ಮೇಲೆತ್ತಬೇಕು, ಯಾವಾಗ ಮುಳುಗಿಸಬೇಕು ಎಂದು ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಸಬ್‌ಮೆರಿನ್ ಯಂತ್ರ ರಿಪೇರಿ ಮಾಡಿದ್ದೇವೆ. ದೇವೇಗೌಡರು, ಕುಮಾರಸ್ವಾಮಿ ಅದನ್ನು ನೋಡಿಕೊಳ್ಳುತ್ತಾರೆ. ಕಲಬುರಗಿ ಪಾಲಿಕೆ ಬಗ್ಗೆ ಖರ್ಗೆ ಮಾತನಾಡಿದ್ದಾರೆ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. 2023ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಇಲ್ಲದೆ ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜೆಡಿಎಸ್ ಅನ್ನು ಅವಲಂಬಿಸಿವೆ. ಅತ್ತ ಮೇಯರ್ ಪಟ್ಟಕ್ಕೆ ಪಟ್ಟು ಹಿಡಿದಿರುವ ಜೆಡಿಎಸ್, ಯಾವ ಪಕ್ಷದೊಂದಿಗೆ ಕೈ ಜೋಡಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ರೇವಣ್ಣ, ಮುಳುಗಿದ ಹಡಗಿನ ಜೊತೆ ಏಕೆ ಬರ್ತೀರಾ? ಮುಳುಗುವ ಹಡಗಿನ ಜತೆ ಸೇರಿ ನಿಮ್ಮ ಸ್ಥಾನಕ್ಕೆ ಕುತ್ತು ತಂದುಕೊಳ್ಳಬೇಡಿ. ಇದರಿಂದ ಬೊಮ್ಮಾಯಿ ಅವರ ಸೀಟಿಗೆ ಕುತ್ತು ಬರುವುದು ಬೇಡ ಎಂದು ಲೇವಡಿ ಮಾಡಿದ್ದರು.
JDS Leader HD Revanna slams state BJP Govt over Temple Demolition Controversy.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm