ಬ್ರೇಕಿಂಗ್ ನ್ಯೂಸ್
16-09-21 02:16 pm Headline Karnataka News Network ಕರ್ನಾಟಕ
ದಾವಣಗೆರೆ, ಸೆ.16 : ಆ ಗ್ರಾಮದ ಗೋಳಿನ ಕಥೆ ಕೇಳಿದರೆ ಅಯ್ಯೋ ಪಾಪ ಎನಿಸದಿರದು. ಗುಡ್ಡಗಾಡು ಪ್ರದೇಶ, ಓಡಾಡಲು ರಸ್ತೆ ಇಲ್ಲ. ಮತ್ತೊಂದೆಡೆ ಕಾಡು ಪ್ರಾಣಿಗಳ ಕಾಟ. ರಾತ್ರಿಯಾದರೆ ಮನೆಯಿಂದ ಹೊರಬರಲು ಭಯ. ಶಾಲೆ - ಕಾಲೇಜಿಗೆ ಹೋಗಿ ಬರುವುದಂತೂ ಭಯದಲ್ಲೇ. ಇನ್ನು ಮಳೆ ಬಂದರೆ ಮುಗೀತು, ಕೆಸರಿನ ಗದ್ದೆಯಾಗುವ ರಸ್ತೆಯಲ್ಲಿ ಬಿದ್ದು ಆಸ್ಪತ್ರೆ ಸೇರುವ ಆತಂಕದಲ್ಲೇ ಓಡಾಡಬೇಕು.
ಈ ಊರಿಗೆ ಬಸ್ ಸಂಚಾರವೂ ಇಲ್ಲ. ಇನ್ನು ಮದುವೆಯಾಗಲು ಕನ್ಯೆ ನೋಡಲು ಬರುವವರಂತೂ ಇಲ್ಲಿನ ರಸ್ತೆ ನೋಡಿಯೇ ಏನೂ ಹೇಳದೇ ವಾಪಸ್ ಹೋಗುತ್ತಿದ್ದಾರೆ. ಪ್ರಧಾನಿ, ಮುಖ್ಯಮಂತ್ರಿ, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಹೇಳಿ ಸಾಕಾಗಿದೆ. ಇಂಥದ್ದೊಂದು ಸಮಸ್ಯೆಗಳನ್ನೇ ಮೈಮೇಲೆ ಹೊದ್ದುಕೊಂಡತಿರುವ ಗ್ರಾಮ ದಾವಣಗೆರೆ ತಾಲೂಕಿನ ಮಾಯಕೊಂಡ ಸಮೀಪದ ಹುಬ್ಳಿ ಪಕ್ಕದಲ್ಲಿರೋ ಎಚ್. ರಾಂಪುರ.
ಈ ಊರಲ್ಲಿ ಸುಮಾರು 50 ಕುಟುಂಬಗಳು ವಾಸವಾಗಿವೆ. ಅಲ್ಲದೇ ಗಡಿ ಗ್ರಾಮವಾಗಿರುವ ಕಾರಣ ಕುಗ್ರಾಮ ಎಂಬ ಹಣೆಪಟ್ಟಿ ಬೇರೆ. ಈ ಊರಲ್ಲಿ ಮೊಬೈಲ್ ನೆಟ್‌ವರ್ಕ್ ಕೂಡ ಸಿಗುವುದಿಲ್ಲ. ಸರಿಯಾದ ರಸ್ತೆ ಇಲ್ಲದೇ, ಸರ್ಕಾರಿ ಬಸ್ ಬಾರದ ಕಾರಣ ಪೋಷಕರು ತಮ್ಮ ಮಕ್ಕಳನ್ನು ಸಂಬಂಧಿಕರ ಮನೆಯಲ್ಲೋ, ಹಾಸ್ಟೆಲಿನಲ್ಲೋ ಇರಿಸಿ ಓದಿಸುವಂತಹ ದುಸ್ಥಿತಿ.
ಇನ್ನು ಯುವಕರಿಗೆ ಹೆಣ್ಣು ಕೊಡುತ್ತಿಲ್ಲ. ಇಲ್ಲಿನ ಯುವತಿಯರನ್ನು ಮದುವೆಯಾಗಲು ಹೊರಭಾಗದ ಯುವಕರು ಮುಂದಾಗುತ್ತಿಲ್ಲ. ಎಷ್ಟೋ ಸಂಬಂಧಗಳು ಈ ಗ್ರಾಮದ ಸಮಸ್ಯೆಯಿಂದಲೇ ಮುರಿದು ಬೀಳುತ್ತಿವೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಓದಿಗಿಂತ ಹೆಚ್ಚಾಗಿ ರಸ್ತೆಯ ಸಮಸ್ಯೆಯಿಂದಲೇ ಬಳಲುತ್ತಿದ್ದಾರೆ. ಒಳ್ಳೆಯ ರಸ್ತೆ ನಿರ್ಮಿಸಿಕೊಡಿ ಎಂದು ಸಾಲು ಸಾಲು ಮನವಿ ಸಲ್ಲಿಸಿದ್ದರೂ ಪ್ರಯೋಜನ ಮಾತ್ರ ಶೂನ್ಯ.
ಎಚ್. ರಾಂಪುರ ಗ್ರಾಮದ ಬಿಂದು ಎಂಬ ಯುವತಿಯೊಬ್ಬಳು ಈಗ ಶಪಥವನ್ನೇ ಮಾಡಿದ್ದಾಳೆ. ಊರಿಗೆ ರಸ್ತೆಯಾಗಿ, ಬಸ್ ಬರುವವರೆಗೂ ಮದುವೆ ಆಗಲ್ಲ ಎಂಬುದಾಗಿ ಶಪಥ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದಾಳೆ. ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದನೆಯೂ ಸಿಕ್ಕಿದೆ.
"ಇದುವರೆಗೂ ಯಾರೊಬ್ಬರೂ ಕ್ಯಾರೇ ಎಂದಿರಲಿಲ್ಲ. ಈಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪತ್ರ ಬರೆದಿರುವುದು ಖುಷಿ ತಂದಿದೆ. ನಾವು ಗುಡ್ಡಗಾಡು ಪ್ರದೇಶದಲ್ಲಿ ನಡೆದುಕೊಂಡು ಹೋಗಬೇಕು. ಏನಾದರೂ ಆದರೆ ಯಾರು ಹೊಣೆ. ನಾವು ಕೇಳುತ್ತಿರುವುದು ಮೂಲಭೂತ ಸೌಕರ್ಯ. ಆದಷ್ಟು ಬೇಗ ರಸ್ತೆ ನಿರ್ಮಾಣ ಆಗಬೇಕು. ಗ್ರಾಮಕ್ಕೆ ಬಸ್ ಬರಬೇಕು. ಆನಂತರವೇ ನಾನು ಮದುವೆಯಾಗುತ್ತೇನೆ ಎಂದು ಬಿಂದು ಹೇಳಿದ್ದಾರೆ.
ಇನ್ನು ಆಸ್ಪತ್ರೆಗೆ ಹೋಗುವವರ ಪಾಡು ದೇವರಿಗೇ ಗೊತ್ತು. ಕಷ್ಟಪಟ್ಟು ನಡೆಯಬೇಕಾದ ಸ್ಥಿತಿ. ರಸ್ತೆ ಹಾಳಾಗಿ ಸಕಾಲಕ್ಕೆ ರೋಗಿಗಳನ್ನು ಆಸ್ಪತ್ರೆಗೆ ಸೇರಿಸಲಾಗುತ್ತಿಲ್ಲ. ಆ್ಯಂಬುಲೆನ್ಸ್ ಬರಲು ಕಷ್ಟವಾಗುತ್ತದೆ. ಮಳೆ ಬಂದರೆ ಇನ್ನೂ ಕಷ್ಟ. ಈ ಗ್ರಾಮದ ಸಮಸ್ಯೆ ಬಗ್ಗೆ ಶಾಸಕರೂ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ 2 ಕಿಲೋಮೀಟರ್ ರಸ್ತೆ ಆಗಿದೆ. ಸರ್ಕಾರದಿಂದ ಹಣ ಬಿಡುಗಡೆಯಾದ ಕೂಡಲೇ ಎಚ್. ರಾಂಪುರದ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಅನುದಾನ ಬರಬೇಕಷ್ಟೇ. ಬಂದ ಕೂಡಲೇ ಕಾಮಗಾರಿ ಶುರು ಮಾಡಲಾಗುವುದು ಎಂದು ಈ ಭಾಗದ ಶಾಸಕ ಪ್ರೊ. ಲಿಂಗಣ್ಣ ಭರವಸೆ ನೀಡಿದ್ದಾರೆ.
ಸಿಎಂ ಸೂಚನೆ ಮೇರೆಗೆ ಗ್ರಾಮಕ್ಕೆ ಭೇಟಿಯಿತ್ತ ಡೀಸಿ !
ಯುವತಿ ಶಪಥ ಮಾಡಿದ್ದು ಸುದ್ದಿಯಾಗುತ್ತಿದ್ದಂತೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಇಂದು ಎಚ್.ರಾಂಪುರ ಗ್ರಾಮಕ್ಕೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಗ್ರಾಮಸ್ಥರ ಸಂಕಷ್ಟ ಆಲಿಸಿದ್ದಾರೆ. ರಸ್ತೆ ನಿರ್ಮಾಣ ಮಾಡಿಕೊಡುವ ಭರವಸೆಯನ್ನೂ ನೀಡಿದ್ದಾರೆ. ಈ ವೇಳೆ ಕಾಡು ಪ್ರಾಣಿಗಳ ಕಾಟ, ನೆಟ್ ವರ್ಕ್ ತೊಂದರೆ, ಗುಡ್ಡಗಾಡು ಪ್ರದೇಶದ ಸಂಕಷ್ಟಗಳು, ರಸ್ತೆ ಹಾಳಾಗಿರುವುದು, ಬಸ್ ಬಾರದಿರುವುದೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಗ್ರಾಮಸ್ಥರು ಡಿಸಿ ಗಮನಕ್ಕೆ ತಂದಿದ್ದು ಪರಿಹಾರದ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.
Davangere Girl says she won't marry unless roads her repaired in her area CM surprised Dc visits home. The girl has posted a video on social media stating she wont marry unless the bad roads her repaired. The video had gone viral on social media.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm