ಬ್ರೇಕಿಂಗ್ ನ್ಯೂಸ್
21-09-21 05:11 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ. 21: ದಲಿತ ಸಮುದಾಯದ ಎರಡು ವರ್ಷದ ಮಗು ಅಚಾನಕ್ಕಾಗಿ ದೇಗುಲ ಪ್ರವೇಶ ಮಾಡಿದ್ದಕ್ಕೆ ಪ್ರತಿಯಾಗಿ ಹೆತ್ತವರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ಕೇಳಿಬಂದಿದೆ.
ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು ದಲಿತ ಸಮುದಾಯದ ಬಾಲಕ ದೇವಸ್ಥಾನ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದಲ್ಲದೆ, ದೇವಸ್ಥಾನವನ್ನು ಶುದ್ದೀಕರಿಸಿದ್ದಾರೆ. ಸೆ.4 ರಂದು ಘಟನೆ ನಡೆದಿದ್ದು ಚನ್ನದಾಸರ ಎಂಬ ಹಿಂದುಳಿದ ಸಮುದಾಯದ ಮಗು ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ಹೋಗಿತ್ತು ಎನ್ನಲಾಗಿದೆ. ಅಂದು ಮಗುವಿನ ಜನ್ಮದಿನದ ಹಿನ್ನೆಲೆ ಮಗುವನ್ನು ಹೆತ್ತವರು ದೇವಸ್ಥಾನಕ್ಕೆ ಕರೆದೊಯ್ದಿದ್ದರು ಎನ್ನಲಾಗಿದೆ. ಆನಂತರ ದೇವಸ್ಥಾನದ ಅರ್ಚಕರು ಮತ್ತು ಗ್ರಾಮದ ಪ್ರಮುಖರು ಸೇರಿ ಮಗುವಿನ ಹೆತ್ತವರಿಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿ ತೆರಳಿದ್ದರು. ಆದರೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ದಂಡ ವಿಧಿಸಿದವರಿಗೆ ಶಿಕ್ಷೆ ವಿಧಿಸುವ ಬದಲು ಕೇವಲ ತರಾಟೆಗೆ ತೆಗೆದುಕೊಂಡು ಕೈತೊಳೆದುಕೊಂಡು ಬಿಟ್ಟಿದ್ದ ಅಧಿಕಾರಿಗಳ ನಡೆಯನ್ನು ಖಂಡಿಸಿದ್ದವು.
ಈ ಬಗ್ಗೆ ಚನ್ನದಾಸರ ಸಮುದಾಯದವರು ಪೊಲೀಸರ ಮೊರೆ ಹೋಗಿದ್ದರೂ, ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ನೇತೃತ್ವದಲ್ಲಿ ಪೊಲೀಸ್, ಕಂದಾಯ, ಸಮಾಜ ಕಲ್ಯಾಣ ಇಲಾಖೆ ಹಾಗೂ ಗ್ರಾಪಂ ಅಧಿಕಾರಿಗಳು ಅಸ್ಪೃಶೃತಾ ನಿವಾರಣೆಯ ಜಾಗೃತಿ ಸಭೆ ನಡೆಸಿ, ಎಚ್ಚರಿಕೆ ನೀಡಿ ತೆರಳಿದ್ದರು.
ಈ ಘಟನೆಯನ್ನು ಖಂಡಿಸಿದ ಕಾಂಗ್ರೆಸ್ ನಾಯಕರು, ಟ್ವಿಟರ್ ನಲ್ಲಿ ಹರಿಹಾಯ್ದಿದ್ದಾರೆ. #ದಲಿತ ವಿರೋಧಿ ಬಿಜೆಪಿ ಎನ್ನುವ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು 'ಮನುಸ್ಮೃತಿಯನ್ನು ನಂಬಿರುವ ಬಿಜೆಪಿ ತನ್ನ ಗುಪ್ತ ಅಜೆಂಡಾವಾದ ದಲಿತ ವಿರೋಧಿ ವಾತಾವರಣವನ್ನು ವ್ಯವಸ್ಥಿತವಾಗಿ ಸ್ಥಾಪಿಸುತ್ತಿರುವ ಪರಿಣಾಮದಿಂದಲೇ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ' ಎಂದು ಆರೋಪಿಸಿದೆ.
ಮನುಸ್ಮೃತಿಯನ್ನು ನಂಬಿರುವ ಬಿಜೆಪಿ ತನ್ನ ಗುಪ್ತ ಅಜೆಂಡಾವಾದ ದಲಿತ ವಿರೋಧಿ ವಾತಾವರಣವನ್ನು ವ್ಯವಸ್ಥಿತವಾಗಿ
— Karnataka Congress (@INCKarnataka) September 21, 2021
ಸ್ಥಾಪಿಸುತ್ತಿರುವ ಪರಿಣಾಮದಿಂದಲೇ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ.@BJP4Karnataka ಪಕ್ಷ ಸಂಪುಟದಲ್ಲಿ ದಲಿತರಿಗೆ ಅವಕಾಶ ನೀಡದೆ ತನಗಿರುವ ದಲಿತರ ಮೇಲಿನ ಅಸಹನೆಯನ್ನ ಬಹಿರಂಗಪಡಿಸಿದೆ.#ದಲಿತವಿರೋಧಿಬಿಜೆಪಿ
The parents of a Dalit boy were fined Rs 23,000 after their 2-year-old son entered a Hanuman temple to seek blessings of the god at Miyapura village near Hanumasagar in Koppal district of Karnataka.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm