ಬ್ರೇಕಿಂಗ್ ನ್ಯೂಸ್
24-09-21 12:22 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.24: ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಪಕ್ಷ ಗಟ್ಟಿಗೊಳಿಸಲು ಪರಸ್ಪರ ಶಾಸಕರನ್ನು ಸೆಳೆಯುವ ಕಸರತ್ತಿನಲ್ಲಿ ತೊಡಗಿದೆ ಎನ್ನುವ ಮಾಹಿತಿಗಳ ಮಧ್ಯೆಯೇ ಪ್ರತೀ ಚುನಾವಣೆಯಲ್ಲಿ ಕಿಂಗ್ ಮೇಕರ್ ಆಗುವ ಜೆಡಿಎಸ್ ಈ ಬಾರಿ ಭಾರೀ ದೊಡ್ಡ ಗಾಳ ಹಾಕಿದೆ. ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರೆಂದೇ ಗುರುತಿಸಿಕೊಂಡಿರುವ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಗೆ ಕರೆತಂದು ರಾಜ್ಯಾಧ್ಯಕ್ಷ ಪಟ್ಟ ನೀಡಲು ಎಚ್.ಡಿ. ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಹತ್ವದ ಮಾತುಕತೆ ನಡೆದಿದ್ದು, ಸಿಎಂ ಇಬ್ರಾಹಿಂ ಅವರು ಕುಮಾರಸ್ವಾಮಿಯವರ ಪ್ರಸ್ತಾಪವನ್ನು ಒಪ್ಪಿದ್ದಾರೆ ಎನ್ನಲಾಗುತ್ತಿದೆ.
ಒಂದು ವರ್ಷದ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಆಯ್ಕೆಯಾದ ಸಂದರ್ಭದಲ್ಲೇ ಸಿಎಂ ಇಬ್ರಾಹಿಂ ಕಾಂಗ್ರೆಸ್ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದರು. ಸಿಎಂ ಇಬ್ರಾಹಿಂ ಆಗಲೇ ಪಕ್ಷ ಬಿಟ್ಟು ಜೆಡಿಎಸ್ ಸೇರಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆನಂತರ, ಸ್ವತಃ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಿಎಂ ಇಬ್ರಾಹಿಂ ಅವರನ್ನು ಮನವೊಲಿಸಿ ಪಕ್ಷದಲ್ಲಿ ಉಳಿಸಿಕೊಂಡಿದ್ದರು. ಆದರೆ, ಈಗ ಮತ್ತೆ ಜೆಡಿಎಸ್ ವರಿಷ್ಠ ದೇವೇಗೌಡ ಮತ್ತು ಕುಮಾರಸ್ವಾಮಿ ಪಕ್ಷ ಸೇರ್ಪಡೆ ಬಗ್ಗೆ ಸಿಎಂ ಇಬ್ರಾಹಿಂ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಎರಡು ದಿನಗಳ ಹಿಂದೆ ಬಿಡದಿಯ ರೆಸಾರ್ಟ್ ನಲ್ಲಿ ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ಈ ಬಗ್ಗೆ ಮಹತ್ವದ ಮೀಟಿಂಗ್ ನಡೆಸಿದ್ದಾರೆ. ಇದರಂತೆ, ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಸದ್ಯಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿಎಂ ಇಬ್ರಾಹಿಂ ನವೆಂಬರ್ ತಿಂಗಳಲ್ಲಿ ಪರಿಷತ್ ಸದಸ್ಯತ್ವ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಲಿದ್ದಾರೆ. ಆನಂತರ, ಅಧಿಕೃತವಾಗಿ ಜೆಡಿಎಸ್ ಸೇರ್ಪೆಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಹಿಂದೆ ದೇವೇಗೌಡರು, ರಾಮಕೃಷ್ಣ ಹೆಗಡೆ ಜೊತೆಗಿದ್ದಾಗ ಜನತಾ ಪರಿವಾರದಲ್ಲಿಯೇ ಇದ್ದ ಸಿಎಂ ಇಬ್ರಾಹಿಂ ಆನಂತರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ದೇವೇಗೌಡರ ನೇತೃತ್ವದ ಜಾತ್ಯತೀತ ಜನತಾದಳಕ್ಕೆ ಬಂದು ಪಕ್ಷದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಇಬ್ರಾಹಿಂ ಪಕ್ಷ ಸೇರ್ಪಡೆಯಾಗಿ, ಅಧ್ಯಕ್ಷ ಪಟ್ಟ ಅಲಂಕರಿಸಿದರೆ ಆಮೂಲಕ ಕರಾವಳಿ ಮತ್ತು ಬೆಂಗಳೂರು, ಮೈಸೂರು ಭಾಗದಲ್ಲಿ ಅಲ್ಪಸಂಖ್ಯಾತ ಮತಗಳನ್ನು ಸೆಳೆಯಬಹುದು ಎನ್ನುವ ಲೆಕ್ಕಾಚಾರ ಇದೆ. ಅಲ್ಲದೆ, ಜನತಾ ಪರಿವಾರದ ಹಳೇ ನಾಯಕರನ್ನು ಒಂದೆಡೆ ಸೇರಿಸಿ, ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ಚುನಾವಣೆ ಎದುರಿಸಬಹುದು ಎನ್ನುವ ಲೆಕ್ಕಾಚಾರ ಜೆಡಿಎಸ್ ನದ್ದು.
ಇದೇ ವೇಳೆ, ಕಾಂಗ್ರೆಸ್ ಪಕ್ಷದಿಂದ ಹಲವು ಶಾಸಕರು ಮತ್ತು ಸ್ಥಳೀಯ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಕುಮಾರಸ್ವಾಮಿ ಗೇಮ್ ಪ್ಲಾನ್ ಹಾಕಿದ್ದಾರೆ. ಈಗಾಗ್ಲೇ ಪಕ್ಷಕ್ಕೆ ಸೆಳೆಯುವ ನಿಟ್ಟಿನಲ್ಲಿ ಕೆಲವು ಶಾಸಕರ ಜೊತೆ ಮಾತುಕತೆ ನಡೆಸಿದ್ದಾರೆ. ಬಿಜೆಪಿಯಲ್ಲಿ ಮುನಿಸಿಕೊಂಡಿರುವ ಶಾಸಕರ ಜೊತೆಗೂ ಕುಮಾರಸ್ವಾಮಿ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ಮುಂದಿನ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಭಾರೀ ತಂತ್ರಗಾರಿಕೆ ನಡೆಸಿದ್ದಾರೆ ಎನ್ನುವುದು ಬಲ್ಲಮೂಲಗಳಿಂದ ತಿಳಿದುಬಂದಿದೆ. ಕನಿಷ್ಠ 40 ಸ್ಥಾನಗಳನ್ನು ಪಡೆದಲ್ಲಿ ಮತ್ತೆ ಕಿಂಗ್ ಮೇಕರ್ ಆಗುವುದು ಖಚಿತ ಎನ್ನುವ ಗುರಿ ಇರಿಸಿಕೊಂಡಿರುವ ಕುಮಾರಸ್ವಾಮಿ ಈ ಬಾರಿ 140 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಇಳಿಸಲು ಚಿಂತನೆ ನಡೆಸಿದ್ದಾರೆ.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm