ಬ್ರೇಕಿಂಗ್ ನ್ಯೂಸ್
26-09-21 12:26 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್‌ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್‌ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.

ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm