ಬ್ರೇಕಿಂಗ್ ನ್ಯೂಸ್
26-09-21 09:43 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.26: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದ ಐದು ಮಂದಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅದನ್ನು ಆಧರಿಸಿ ಪೊಲೀಸರು ಕ್ರನ ಜರುಗಿಸಿದ್ದಾರೆ.
ಬೆಂಗಳೂರಿನ ಆರ್.ಆರ್ ನಗರದಲ್ಲಿ 6 ಕಡೆ ಹಾಗೂ ಕೆಂಗೇರಿಯಲ್ಲಿ 8 ಕಾರುಗಳನ್ನು ಗಾಜು ಪುಡಿ ಮಾಡಲಾಗಿದೆ. ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕೃತ್ಯ ಎಸಗಿದ್ದು 14 ಕಾರುಗಳ ಗಾಜು ಒಡೆದು ದುಷ್ಕೃತ್ಯ ಮೆರೆದಿದ್ದರು. ಈ ಹಿನ್ನೆಲೆಯಲ್ಲಿ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಐದು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳೆಲ್ಲರೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಎಲ್ಲರೂ ಕೂಡ 7 ನೇ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸ್ನೇಹಿತನ ಬರ್ತ್ ಡೇ ಪಾರ್ಟಿ ಮಾಡಿದ್ದರು. ನಂತರ ಕೂಲ್ ಡ್ರಿಂಗ್ಸ್ ಖರೀದಿಸಲು ಹೊರಗೆ ಬಂದಿದ್ದ ತಂಡ ಪೆಟ್ರೋಲ್ ಬಂಕ್‌ಗೆ ತೆರಳುವ ಮೊದಲು ರಸ್ತೆಯ ಪಕ್ಕದಲ್ಲಿ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜುಗಳನ್ನು ಒಡೆದಿದ್ದಾರೆ.

ಐವರು ಆರೋಪಿಗಳ ಪೈಕಿ ಮೂವರು ಕೆಂಗೇರಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದರು. ಉಳಿದ ಇಬ್ಬರು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ವಾಹನಗಳನ್ನು ಜಖಂ ಮಾಡಿ ಪುಂಡಾಟ ನಡೆಸಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬಂಧಿಸಿದ್ದು, ತನಿಖೆಗೆ ಒಳಪಡಿಸಿದ್ದಾರೆ.
Engineering students break glasses of more than 14 cars in Bangalore act which was recorded in CCTV. The police have arrested the students and the investigation is still going on.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm